ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: 'ನನ್ನ ಮಧ್ಯಪ್ರವೇಶ ಇಲ್ಲದಿದ್ದರೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಸುಮಾರು 3.5 ಕೋಟಿ ಜನರು ಸಾವಿಗೀಡಾಗುತ್ತಿದ್ದರು ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ತಿಳಿಸಿರುವುದಾಗಿ' ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಎರಡನೇ ಅವಧಿಯ ಮೊದಲ ಸ್ಟೇಟ್ ಆಫ್ ಯೂನಿಯನ್ ಭಾಷಣದಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಟ್ರಂಪ್ ಮಾತನಾಡಿದ್ದು, ಈ ವೇಳೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಸಂಘರ್ಷ ಸೇರಿದಂತೆ ಒಟ್ಟು ಎಂಟು ಯುದ್ಧಗಳನ್ನು ನಿಲ್ಲಿಸಿರುವುದಾಗಿ ಟ್ರಂಪ್ ಮತ್ತೊಮ್ಮೆ ಹೇಳಿದ್ದಾರೆ, ಈ ಮೂಲಕ 80ಕ್ಕೂ ಹೆಚ್ಚು ಬಾರಿ ಈ ಹೇಳಿಕೆ ನೀಡಿದ್ದಾರೆ.
ನಾವು ಅಮೆರಿಕನ್ನರಿಗೆ ದೇಶ ಮತ್ತು ವಿದೇಶಗಳಲ್ಲಿ ಸುರಕ್ಷತೆಯನ್ನು ಒದಗಿಸಿದ್ದೇವೆ. ನನ್ನ ಎರಡನೇ ಅವಧಿಯ ಮೊದಲ ಹತ್ತು ತಿಂಗಳಲ್ಲಿ 8 ಯುದ್ಧಗಳನ್ನು ನಿಲ್ಲಿಸಿದ್ದೇನೆ ಎಂದು ಟ್ರಂಪ್ ತಿಳಿಸಿದ್ದಾರೆ.
ಪರಮಾಣು ಹೊಂದಿದ್ದ ಭಾರತ– ಪಾಕ್ ದೇಶಗಳು ಸಂಘರ್ಷವನ್ನು ನಿಲ್ಲಿಸದಿದ್ದರೆ ಶೇ 200ರಷ್ಟು ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದೆ. ಈ ಮೂಲಕ ಯುದ್ಧವನ್ನು ನಿಲ್ಲಿಸಿದ್ದೆ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಕಳೆದ ವರ್ಷ ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.