ಡೊನಾಲ್ಡ್ ಟ್ರಂಪ್
(ರಾಯಿಟರ್ಸ್ ಚಿತ್ರ)
ವಾಷಿಂಗ್ಟನ್: ಡೌ ಜೋನ್ಸ್, ನ್ಯೂಸ್ ಕಾರ್ಪ್, ರೂಪರ್ಟ್ ಮುರ್ಡೋಕ್ ಹಾಗೂ ‘ದಿ ವಾಲ್ ಸ್ಟ್ರೀಟ್ ಜರ್ನಲ್’ನ ಇಬ್ಬರು ವರದಿಗಾರರ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ.
ಡೊನಾಲ್ಡ್ ಟ್ರಂಪ್ ಅವರು ಮಿಯಾಮಿ ಫೆಡರಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ. ದೂರಿನ ಪ್ರತಿ ತಕ್ಷಣಕ್ಕೆ ಲಭ್ಯವಿಲ್ಲ.
2003ರಲ್ಲಿ ಜೆಫ್ರಿ ಎಪ್‌ಸ್ಟೀನ್ ಅವರ 50ನೇ ಹುಟ್ಟುಹಬ್ಬದ ಪ್ರಯುಕ್ತ ಟ್ರಂಪ್ ಶುಭಾಶಯ ಕೋರಿರುವ ಬಗ್ಗೆ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ಇದರಲ್ಲಿ ಆಕ್ಷೇಪಾರ್ಹ ಚಿತ್ರ ಮತ್ತು ರಹಸ್ಯಗಳ ಉಲ್ಲೇಖವಿತ್ತು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಟ್ರಂಪ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ದಿ ವಾಲ್ ಸ್ಟ್ರೀಟ್ ಜರ್ನಲ್ ಎಂಬ ನಿಷ್ಪ್ರಯೋಜಕ ಪತ್ರಿಕೆಯಲ್ಲಿ ಸುಳ್ಳು, ದುರುದ್ದೇಶಪೂರಿತ, ಮಾನಹಾನಿಕರ, ನಕಲಿ ಸುದ್ದಿ ಪ್ರಕಟಿಸುವಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರ ವಿರುದ್ಧ ನಾವು ಮೊಕದ್ದಮೆ ಹೂಡಿದ್ದೇವೆ. ಹಾಗೆಯೇ ರೂಪರ್ಟ್ ಮುರ್ಡೋಕ್ ಮತ್ತು ರಾಬರ್ಟ್ ಥಾಮ್ಸನ್ ಮಾಲೀಕತ್ವದ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ನಾವು ಅಮೆರಿಕವನ್ನು ಮತ್ತೊಮ್ಮೆ ಶ್ರೇಷ್ಠವಾಗಿಸುತ್ತೇವೆ’ ಎಂದು ಟ್ರಂಪ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.