ವಾಷಿಂಗ್ಟನ್: ಅಮೆರಿಕದ ಪ್ರಮುಖ ಬಲಪಂಥೀಯ ಕಾರ್ಯಕರ್ತ ಚಾರ್ಲಿ ಕಿರ್ಕ್ ಅವರಿಗೆ ಮರಣೋತ್ತರವಾಗಿ ಅಮೆರಿಕದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಪ್ರೆಸಿಡೆನ್ಷಿಯಲ್ ಮೆಡಲ್ ಆಫ್ ಫ್ರೀಡಂ’ ಅನ್ನು ಬುಧವಾರ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ.
ಚಾರ್ಲಿ ಕಿರ್ಕ್ ಅವರ 32ನೇ ಜನ್ಮದಿನದ ಸಂದರ್ಭದಲ್ಲೇ ಈ ಪ್ರಶಸ್ತಿ ಘೋಷಣೆಯಾಗಿದೆ.
ಅಮೆರಿಕದ ಒರೆಮ್ ನಗರದ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಸೆ.10ರಂದು ನಡೆದ ‘ದಿ ಅಮೆರಿಕನ್ ಕಮ್‌ಬ್ಯಾಕ್ ಟೂರ್’ ಕಾರ್ಯಕ್ರಮದ ಸಂದರ್ಭದಲ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
‘ಮುಂದಿನ ತಲೆಮಾರಿಗೆ ಸ್ಫೂರ್ತಿಯ ಚಿಲುಮೆಯಾಗಿದ್ದ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಪ್ರತಿಮ ಯೋಧನನ್ನು ನಾವು ಸದಾ ಸ್ಮರಿಸುತ್ತೇವೆ’ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
‘ರಾಷ್ಟ್ರೀಯ ಭದ್ರತೆ ಮತ್ತು ಹಿತಾಸಕ್ತಿಗೆ ಅಪ್ರತಿಮ ಕೊಡುಗೆ ನೀಡುವ ವ್ಯಕ್ತಿಗಳಿಗೆ ‘ಪ್ರೆಸಿಡೆನ್ಷಿಯಲ್ ಮೆಡಲ್ ಆಫ್ ಫ್ರೀಡಂ’ ನೀಡಿ ಗೌರವಿಸಲಾಗುತ್ತದೆ. 1963ರಲ್ಲಿ ಅಧ್ಯಕ್ಷ ಜಾನ್ ಎಫ್. ಕೆನಡಿ ಈ ಪ್ರಶಸ್ತಿ ಸ್ಥಾಪಿಸಿದ್ದರು.