ADVERTISEMENT

Donald Trump: ಕೊನೆಗೂ ಟ್ರಂಪ್ ಕೈಸೇರಿತು ನೊಬೆಲ್ ಶಾಂತಿ ಪುರಸ್ಕಾರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜನವರಿ 2026, 4:13 IST
Last Updated 16 ಜನವರಿ 2026, 4:13 IST
<div class="paragraphs"><p>ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ&nbsp;ನೊಬೆಲ್ ಪುರಸ್ಕೃತೆ&nbsp;ಮಾರಿಯಾ ಕೊರಿನಾ ಮಚಾದೊ</p></div>

ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ನೊಬೆಲ್ ಪುರಸ್ಕೃತೆ ಮಾರಿಯಾ ಕೊರಿನಾ ಮಚಾದೊ

   

ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ಅವರು ತಮಗೆ ದೊರೆತಿರುವ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಮಚಾದೊ ಅವರು ಶ್ವೇತಭವನದಲ್ಲಿ ಟ್ರಂಪ್ ಅವರನ್ನು ಭೇಟಿಯಾಗಿದ್ದರು.

ಈ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮಚಾದೊ, ವೆನೆಜುವೆಲಾದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳು ಮತ್ತು ಶಾಂತಿಯುತ ಪರಿವರ್ತನೆಯನ್ನು ಉತ್ತೇಜಿಸಿದ ಕೆಲಸಕ್ಕಾಗಿ ತಮಗೆ 2025 ರಲ್ಲಿ ದೊರೆತ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶ್ವೇತಭವನದಲ್ಲಿ ಬಿಟ್ಟು ಬಂದಿರುವುದಾಗಿ ತಿಳಿಸಿದ್ದಾರೆ. ಆದರೆ, ಇದನ್ನು ಡೊನಾಲ್ಡ್ ಟ್ರಂಪ್ ಸ್ವೀಕರಿಸಿರುವ ಬಗ್ಗೆ ಅವರು ತಿಳಿಸಿಲ್ಲ.

ADVERTISEMENT

ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡ ಟ್ರಂಪ್

ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾದೊ ನೀಡಿರುವ ಪ್ರಶಸ್ತಿಯನ್ನು ಸ್ವೀಕರಿಸಿರುವುದಾಗಿ ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುತ್‌’ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

‘ವೆನೆಜುವೆಲಾದ ಮರಿಯಾ ಕೊರಿನಾ ಮಚಾದೊ ಅವರನ್ನು ಭೇಟಿಯಾಗಲು ಅವಕಾಶ ಸಿಕ್ಕಿರುವುದು ನನ್ನ ಪಾಲಿಗೆ ದೊಡ್ಡ ಗೌರವವಾಗಿತ್ತು. ಮಚಾದೊ ಅನೇಕ ಕಷ್ಟಗಳನ್ನು ಎದುರಿಸಿದ್ದಾರೆ. ಮರಿಯಾ ಅವರು ತಾವು ಗೆದ್ದ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನಾನು ಮಾಡಿದ ಕೆಸಲಗಳನ್ನು ಗುರುತಿಸಿ ನನಗೆ ಉಡುಗೊರೆಯಾಗಿ ನೀಡಿದ್ದಾರೆ. ಇಂತಹ ಅದ್ಭುತ ಸನ್ನಿವೇಶ ಸೃಷ್ಟಿಸಿದ್ದಕ್ಕಾಗಿ ನಿಮಗೆ ಧನ್ಯವಾದಗಳು. ನೀವು ಅದ್ಭುತ ಮಹಿಳೆ’ ಎಂದು ಬರೆದುಕೊಂಡಿದ್ದಾರೆ.

ಆದರೆ, ನೋಬೆಲ್ ಶಾಂತಿ ಪ್ರಶಸ್ತಿಯನ್ನು ವರ್ಗಾಯಿಸುವ ಅಥವಾ ಇತರರೊಂದಿಗೆ ಹಂಚಿಕೊಳ್ಳುವ ಯಾವುದೇ ಅವಕಾಶ ಇಲ್ಲ ಎಂದು ನಾರ್ವೇಜಿಯನ್ ನೊಬೆಲ್ ಸಂಸ್ಥೆ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.