ADVERTISEMENT

ಟ್ರಂಪ್‌ರನ್ನು ಭೇಟಿ ಮಾಡಿದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್

ಪಿಟಿಐ
Published 26 ಸೆಪ್ಟೆಂಬರ್ 2025, 3:05 IST
Last Updated 26 ಸೆಪ್ಟೆಂಬರ್ 2025, 3:05 IST
<div class="paragraphs"><p>ಟ್ರಂಪ್‌- ಶೆಹಬಾಜ್ ಷರೀಫ್</p></div>

ಟ್ರಂಪ್‌- ಶೆಹಬಾಜ್ ಷರೀಫ್

   

ನ್ಯೂಯಾರ್ಕ್/ವಾಷಿಂಗ್ಟನ್: ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಫೀಲ್ಡ್ ಮಾರ್ಷಲ್ ಆಸಿಮ್ ಮುನೀರ್  ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು.

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಅಧಿವೇಶನದಲ್ಲಿ ಭಾಗಿಯಾಗಲು ಷರೀಫ್ ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಷರೀಫ್ ಮಾತನಾಡಲಿದ್ದಾರೆ.

ADVERTISEMENT

ಟ್ರಂಪ್‌ರನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ವಾಷಿಂಗ್ಟನ್‌ಗೆ ಗುರುವಾರ ಪ್ರಯಾಣ ಬೆಳೆಸಿದ್ದರು. ಶ್ವೇತಭವನಕ್ಕೆ ಷರೀಫ್‌ರ ಮೊದಲ ಭೇಟಿ ಇದಾಗಿದೆ.

ಅಮೆರಿಕ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಮಾತುಕತೆ ನಡೆದಿದೆ. ಈ ವೇಳೆ ಟ್ರಂಪ್‌ ವ್ಯಾಪಾರ ಒಪ್ಪಂದಗಳಿಗೆ ಸಂಬಂಧಿಸಿದಂತೆ ಅನೇಕ ಕಡತಗಳಿಗೆ ಸಹಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್‌, ಭಾರತ–ಪಾಕಿಸ್ತಾನದ ನಡುವಿನ ಭೀಕರ ಯುದ್ಧವನ್ನು ತಡೆದಿದ್ದೇನೆ ಎಂದು ಪುನರುಚ್ಚರಿಸಿದರು.

ಭಾರತ-ಪಾಕಿಸ್ತಾನ ಬಿಕ್ಕಟ್ಟಿನ ಸಂದರ್ಭದಲ್ಲಿ ಟ್ರಂಪ್ ಅ‌ವರ ನಿರ್ಣಾಯಕ ರಾಜತಾಂತ್ರಿಕ ಹಸ್ತಕ್ಷೇಪದಿಂದಾಗಿ ಯುದ್ಧ ಕೊನೆಗೊಂಡಿದೆ ಎಂದು ಪಾಕಿಸ್ತಾನವು 2026ರ ನೊಬೆಲ್ ಶಾಂತಿ ಪ್ರಶಸ್ತಿಗೆ ಅವರನ್ನು ಇತ್ತೀಚೆಗೆ ನಾಮನಿರ್ದೇಶನ ಮಾಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.