ADVERTISEMENT

ಶಾಂತಿ: ಟ್ರಂಪ್‌ ಪ್ರಯತ್ನ ಹೊಗಳಿದ ಪುಟಿನ್

ಏಜೆನ್ಸೀಸ್
Published 10 ಅಕ್ಟೋಬರ್ 2025, 16:08 IST
Last Updated 10 ಅಕ್ಟೋಬರ್ 2025, 16:08 IST
ವ್ಲಾದಿಮಿರ್‌ ಪುಟಿನ್
ವ್ಲಾದಿಮಿರ್‌ ಪುಟಿನ್   

ಮಾಸ್ಕೊ: ‘ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರಿಗೆ ನೊಬೆಲ್‌ ಶಾಂತಿ ಪ್ರಶಸ್ತಿ ಸಿಗದೇ ಹೋದರೂ, ವಿಶ್ವದಲ್ಲಿ ಶಾಂತಿ ಸ್ಥಾಪನೆಗೆ ಅವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ’ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್ ಶುಕ್ರವಾರ ಹೇಳಿದ್ದಾರೆ.

‘ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್‌ ಪ್ರಶಸ್ತಿ ನೀಡುವ ಮೂಲಕ ಟ್ರಂಪ್‌ ಅವರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ನೀವು ಭಾವಿಸುವಿರಾ’ ಎಂಬ ಪತ್ರಕರ್ತರ ಪ್ರಶ್ನೆಗೆ, ಪುಟಿನ್‌ ಈ ಪ್ರತಿಕ್ರಿಯೆ ನೀಡಿದ್ದಾರೆ.

‘ಟ್ರಂಪ್‌ ಅವರು ಹಲವಾರು ಸಂಕೀರ್ಣ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದಾರೆ. ಗಾಜಾ ಶಾಂತಿ ಒಪ್ಪಂದ ಅಂದುಕೊಂಡಂತೆ ಜಾರಿಯಾದಲ್ಲಿ, ಅದು ಐತಿಹಾಸಿಕ ಸಾಧನೆಯಾಗಲಿದೆ’ ಎಂದೂ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.