ಡೊನಾಲ್ಡ್ ಟ್ರಂಪ್
– ಫೇಸ್‌ಬುಕ್ ಚಿತ್ರ
ವಾಷಿಂಗ್ಟನ್: ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಸೂಕ್ಷ್ಮ ತಂತ್ರವೊಂದನ್ನು ರೂಪಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಹೇಳಿದ್ದಾರೆ.
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ರಾಯಭಾರಿ ಸ್ವೀವ್ ವಿಟ್ಕಾಫ್ ಮತ್ತು ಉಕ್ರೇನಿಯನ್ ಅಧಿಕಾರಿಗಳನ್ನು ಭೇಟಿ ಮಾಡಲು ಸೇನಾ ಕಾರ್ಯದರ್ಶಿ ಡ್ಯಾನ್ ಡ್ರಿಸ್ಕಾಲ್ ಅವರನ್ನು ಕಳುಹಿಸುವುದಾಗಿಯೂ ಹೇಳಿದ್ದಾರೆ.
ಮಂಗಳವಾರ ಸಂಜೆ ಏರ್‌ಫೋರ್ಸ್ ಒನ್‌ನಲ್ಲಿ ಮಾತನಾಡಿದ ಟ್ರಂಪ್, ‘ಯುದ್ಧ ನಿಲ್ಲಿಸುವುದು ಕಷ್ಟ. ಅದಕ್ಕಾಗಿ ಪ್ರಸ್ತುತ 28 ಅಂಶಗಳ ತಂತ್ರವೊಂದನ್ನು ರೂಪಿಸಲಾಗಿದೆ. ಇದನ್ನೊಂದು ಪರಿಕಲ್ಪನೆ ಎಂದೇ ಹೇಳಬಹುದು’ ಎಂದು ತಿಳಿಸಿದ್ದಾರೆ.
ಸುಮಾರು ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವ ಉದ್ದೇಶದಿಂದ ರೂಪಿಸಲಾದ ಟ್ರಂಪ್ ಅವರ ಈ ತಂತ್ರ ಕಳೆದ ವಾರ ಹೊರಬಿದ್ದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.