

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾರ್ಚ್‌ನಲ್ಲಿ ಗ್ರೀನ್‌ಲ್ಯಾಂಡ್‌ಗೆ ಭೇಟಿ ನೀಡಲು ಯೋಜಿಸಿದ್ದಾರೆ ಎಂದು ಟ್ರಂಪ್ ಅವರ ವಿಶೇಷ ನಿಯೋಗದ ಸದಸ್ಯರೊಬ್ಬರು ಹೇಳಿದ್ದಾರೆ.
ಇಂದು (ಶುಕ್ರವಾರ) ಫಾಕ್ಸ್ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಿಯೋಗದ ಸದಸ್ಯ ಜೆಫ್ ಲ್ಯಾಂಡ್ರಿ, ಗ್ರೀನ್‌ಲ್ಯಾಂಡ್ ಮತ್ತು ಡೆನ್ಮಾರ್ಕ್ ನಾಯಕರನ್ನು ಭೇಟಿ ಮಾಡಲು ಅಮೆರಿಕದ ಶಾಸಕರನ್ನು ಒಳಗೊಂಡ ದ್ವಿಪಕ್ಷೀಯ ನಿಯೋಗವು ಸಜ್ಜಾಗಿದೆ. ಭೇಟಿ ವೇಳೆ ಒಪ್ಪಂದ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
ಈ ಬಗ್ಗೆ ಟ್ರಂಪ್ ಗಂಭೀರವಾಗಿ ಮಾತನಾಡಿದ್ದಾರೆ. ಅವರು ಈಗಾಗಲೇ ಸೂಚನೆಗಳನ್ನು ನೀಡಿದ್ದಾರೆ ಎಂದು ನಾನು ಭಾವಿಸುತ್ತೇನೆ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.