ಲಂಡನ್‌ನ ಡೌನಿಂಗ್ ಸ್ಟ್ರೀಟ್‌ನಲ್ಲಿ ಗುರುವಾರ ನಡೆದ ಸಭೆಯಿಂದ ಹೊರಬಂದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ–ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್
ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಗುರುವಾರ ಬೆಳಿಗ್ಗೆ ಬ್ರಿಟನ್ ಪ್ರಧಾನಿ ಕಿಯರ್ ಸ್ಟಾರ್ಮರ್ ಅವರನ್ನು ಲಂಡನ್‌ನಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಉಕ್ರೇನ್ ಯುದ್ಧ ಕೊನೆಗೊಳಿಸುವ ಸಂಬಂಧ ಶುಕ್ರವಾರ ಅಲಾಸ್ಕಾದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿ ಮಾತುಕತೆ ನಡೆಸಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಯುರೋಪ್‌ನ ಹಲವು ನಾಯಕರ ಜೊತೆಗೆ ಬುಧವಾರ ವರ್ಚುವಲ್ ಸಭೆ ನಡೆಸಿದ ಮರುದಿನವೇ ಝೆಲೆನ್‌ಸ್ಕಿ ಲಂಡನ್‌ಗೆ ಭೇಟಿ ನೀಡಿದರು. ಈ ವೇಳೆ ಉಭಯ ನಾಯಕರು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.
‘ಅಲಾಸ್ಕಾ ಶೃಂಗಸಭೆಯು ಅತ್ಯಂತ ಮುಖ್ಯವಾಗಿದ್ದು, ಉಕ್ರೇನ್ ಸಂಘರ್ಷ ಕೊನೆಗಾಣಿಸಲು ಕಾರ್ಯಸಾಧುವಾದ ಮಾರ್ಗವಾಗಿದೆ. ಆದರೆ, ರಷ್ಯಾಕ್ಕೆ ಭೂಪ್ರದೇಶ ಬಿಟ್ಟುಕೊಡಲು ಡೊನಾಲ್ಡ್ ಟ್ರಂಪ್ ಒತ್ತಾಯಿಸಬಹುದೆಂದು ಯುರೋಪ್ ರಾಷ್ಟ್ರಗಳು ಕಳವಳ ವ್ಯಕ್ತಪಡಿಸಿವೆ. ಅಗತ್ಯ ಬಿದ್ದರೆ, ರಷ್ಯಾದ ಮೇಲೆ ಒತ್ತಡ ಹೇರಲು ಐರೋಪ್ಯ ಒಕ್ಕೂಟವು ಮುಂದಾಗಲಿದೆ’ ಎಂದು ಸ್ಟಾರ್ಮರ್ ಅವರು ಈ ವೇಳೆ ಝೆಲೆನ್‌ಸ್ಕಿಗೆ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.