
ಪಿಟಿಐ
ಪಿಟಿಐ
ನ್ಯೂಯಾರ್ಕ್/ವಾಷಿಂಗ್ಟನ್: ‘ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ತಪ್ಪಿಸಿದ್ದು ನಾನೇ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮತ್ತೊಮ್ಮೆ ಹೇಳಿದ್ದಾರೆ.
ಫ್ಲಾರಿಡಾದಲ್ಲಿ ಈ ಹೇಳಿಕೆ ನೀಡಿರುವ ಟ್ರಂಪ್, ‘ ಎರಡು ಅಣ್ವಸ್ತ್ರ ರಾಷ್ಟ್ರಗಳ ನಡುವಿನ ಸಂಭವನೀಯ ಯುದ್ಧವನ್ನು ತಡೆದೆ. ಲಕ್ಷಾಂತರ ಜೀವಗಳನ್ನು ಉಳಿಸಿದ್ದಕ್ಕಾಗಿ ಪಾಕಿಸ್ತಾನ ನಾಯಕತ್ವ ನನ್ನನ್ನು ಗೌರವಿಸಿತು’ ಎಂದಿದ್ದಾರೆ.
ಮೇ 10ರ ನಂತರ ಟ್ರಂಪ್ ಅವರು, ಭಾರತ–ಪಾಕ್ ಸಮರ ನಿಲ್ಲಿಸಿದ್ದಾಗಿ 60ಕ್ಕೂ ಹೆಚ್ಚು ಬಾರಿ ಹೇಳಿಕೊಂಡಿದ್ದಾರೆ. ಆದರೆ ಭಾರತ ಮೂರನೇ ವ್ಯಕ್ತಿಯ ಮಧ್ಯಪ್ರವೇಶವನ್ನು ನಿರಾಕರಿಸುತ್ತಾ ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.