ವಾಷಿಂಗ್ಟನ್: ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಇಸ್ರೇಲ್ ರೂಪಿಸಿದ್ದ ಯೋಜನೆ ಕಾರ್ಯಗತವಾಗುವುದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಡೆದಿದ್ದಾರೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಖಮೇನಿ ಅವರ ಹತ್ಯೆಗೆ ಯೋಜನೆ ರೂಪಿಸಿರುವುದಾಗಿ ಇಸ್ರೇಲ್‌ನ ಅಧಿಕಾರಿಗಳು ಇತ್ತೀಚೆಗೆ ಟ್ರಂಪ್ ಆಡಳಿತಕ್ಕೆ ತಿಳಿಸಿದ್ದರು. ಇದಕ್ಕೆ ಟ್ರಂಪ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದನ್ನು ಇಸ್ರೇಲಿ ಅಧಿಕಾರಿಗಳಿಗೆ ಸ್ಪಷ್ಟವಾಗಿ ತಿಳಿಸಿದ್ದೇವೆ’ ಎಂದು ಅವರು ವಿವರಿಸಿದ್ದಾರೆ.
ಈ ಕುರಿತು ‘ಫಾಕ್ಸ್ ನ್ಯೂಸ್’ ಕೇಳಿದ ಪ್ರಶ್ನೆಗೆ ನೇರವಾಗಿ ಉತ್ತರಿಸದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ‘ನಾವು ಏನು ಮಾಡಬೇಕೋ ಅದನ್ನು ಮಾಡುತ್ತೇವೆ. ಹಾಗೆಯೇ ಅಮೆರಿಕಕ್ಕೆ ಏನು ಒಳ್ಳೆಯದು ಎಂಬುದೂ ಗೊತ್ತಿದೆ ಎಂದು ಭಾವಿಸುತ್ತೇನೆ’ ಎಂದು ಉತ್ತರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.