ADVERTISEMENT

ಕೆನಡಾ, ಮೆಕ್ಸಿಕೊದಿಂದ ಆಮದಾಗುವ ವಸ್ತುಗಳಿಗೆ ಶೇ 25ರಷ್ಟು ಸುಂಕ: ಟ್ರಂಪ್‌

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಣೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2025, 23:30 IST
Last Updated 4 ಮಾರ್ಚ್ 2025, 23:30 IST
ವಾಷಿಂಗ್ಟನ್‌ನಲ್ಲಿರುವ ಶ್ವೇತಭವನದ ರೂಸ್‌ವೆಲ್ಟ್‌ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌–ಎಎಫ್‌ಪಿ ಚಿತ್ರ
ವಾಷಿಂಗ್ಟನ್‌ನಲ್ಲಿರುವ ಶ್ವೇತಭವನದ ರೂಸ್‌ವೆಲ್ಟ್‌ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌–ಎಎಫ್‌ಪಿ ಚಿತ್ರ   

ವಾಷಿಂಗ್ಟನ್‌: ‘ಮೆಕ್ಸಿಕೊ ಮತ್ತು ಕೆನಡಾದಿಂದ ಅಮೆರಿಕಕ್ಕೆ ಆಮದು ಮಾಡಿಕೊಳ್ಳುವ ವಸ್ತುಗಳಿಗೆ ಮಂಗಳವಾರದಿಂದ ಶೇಕಡ 25ರಷ್ಟು ಸುಂಕ ಹೇರಲಾಗುವುದು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ.

ಈ ನಿರ್ಧಾರದಿಂದ ತೀವ್ರವಾದ ಹಣದುಬ್ಬರ ಹಾಗೂ ಪ್ರಗತಿಯಲ್ಲಿ ಕುಂಠಿತವಾಗುತ್ತಿರುವ ಉತ್ತರ ಅಮೆರಿಕ ರಾಷ್ಟ್ರಗಳಲ್ಲಿ ಹೊಸ ಆತಂಕ ಸೃಷ್ಟಿಸಿದೆ.

‘ಕೆನಡಾ ಮತ್ತು ಮೆಕ್ಸಿಕೊದಿಂದ ಬರುವ ಉತ್ಫನ್ನಗಳ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸಲಾಗುತ್ತಿದೆ. ಈ ವಿಷಯದಲ್ಲ ವಿಳಂಬ ಮಾಡುವುದಿಲ್ಲ’ ಎಂದು ಶ್ವೇತಭವನದಲ್ಲಿ  ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ADVERTISEMENT

‘ಅವರಿಗೆ ಸುಂಕ ವಿಧಿಸಲೇಬೇಕಾಗುತ್ತದೆ’ ಎಂದು ಅವರು ಪುನರುಚ್ಚರಿಸಿದರು.

‘ಅನಿಯಂತ್ರಿತ ಕಳ್ಳಸಾಗಣೆ ಹಾಗೂ ಅಕ್ರಮ ವಲಸೆಯ ವಿರುದ್ಧ ಕ್ರಮ ಕೈಗೊಳ್ಳಲು ಎರಡು ರಾಷ್ಟ್ರಗಳ ಮೇಲೂ ಸುಂಕ ವಿಧಿಸುವುದು ಅನಿವಾರ್ಯ ಎಂದು ಟ್ರಂಪ್‌ ತಿಳಿಸಿದರು. ಅಮೆರಿಕದ ವ್ಯಾಪಾರ ಅಸಮತೋಲನ ಹೋಗಲಾಡಿಸಲು ನಿರಂತರ ಪ್ರಯತ್ನಿಸುತ್ತಿದ್ದು, ಹೆಚ್ಚು ಹೆಚ್ಚು ಕಾರ್ಖಾನೆಗಳನ್ನು ಅಮೆರಿಕಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.