ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ‘ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಅಕ್ರಮ ಎಸಗಿದರೆ ಅಂಥ ಶಾಲೆ ಹಾಗೂ ಕಾಲೇಜುಗಳಿಗೆ ನೀಡುತ್ತಿರುವ ಅನುದಾನವನ್ನು ಕಡಿತಗೊಳಿಸಲಾಗುವುದು’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯ ಹಂಚಿಕೊಂಡಿರುವ ಅವರು, ‘ಪ್ರತಿಭಟನೆ ನಡೆಸುವವರನ್ನು ಮುಲಾಜಿಲ್ಲದೆ ಜೈಲಿಗಟ್ಟಲಾಗುವುದು. ಒಂದೊಮ್ಮೆ ಪ್ರತಿಭಟನಾಕಾರರು ಅನ್ಯ ದೇಶದವರಾಗಿದ್ದರೆ ಗಡೀಪಾರು ಮಾಡಲಾಗುವುದು’ ಎಂದಿದ್ದಾರೆ.
‘ಅಪರಾಧ ಪ್ರಕರಣಗಳ ಗಂಭೀರತೆಯ ಆಧಾರದಲ್ಲಿ ಅಮೆರಿಕದ ವಿದ್ಯಾರ್ಥಿಗಳನ್ನು ಶಾಶ್ವತವಾಗಿ ಹೊರಹಾಕಲಾಗುವುದು. ಒಂದೊಮ್ಮೆ ಗಂಭೀರ ಪ್ರಕರಣದಲ್ಲಿ ವಿದ್ಯಾರ್ಥಿಗಳು ಭಾಗಿಯಾದಲ್ಲಿ ಬಂಧಿಸಲಾಗುವುದು’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.