
ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್: ಕಾಂಬೋಡಿಯಾ ಮತ್ತು ಥಾಯ್ಲೆಂಡ್ ನಡುವಿನ ಯುದ್ಧವನ್ನು ನಿಲ್ಲಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ವಾರಾಂತ್ಯ ಕಳೆಯಲು ಫ್ಲಾರಿಡಾದಲ್ಲಿನ ತಮ್ಮ ಎಸ್ಟೇಟ್‌ಗೆ ತೆರಳುವ ವೇಳೆ ಅವರು ಏರ್ ಫೋರ್ಸ್ ಒನ್ ವಿಮಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಉಭಯ ದೇಶದ ಪ್ರಧಾನಿಗಳ ಜೊತೆ ದೂರವಾಣಿಯಲ್ಲಿ ಚರ್ಚಿಸಿ, ಇಂದೇ ಯುದ್ಧ ನಿಲ್ಲಿಸಿದ್ದೇನೆ. ಜಗತ್ತಿನ ಹಲವು ದೇಶಗಳ ಮೇಲೆ ಪ್ರತಿಸುಂಕ ಹೇರಿದ ನಂತರ ಇದೆಲ್ಲವೂ ಸಾಧ್ಯವಾಗುತ್ತಿದೆ’ ಎಂದರು.
ಆಗ್ನೇಯ ಏಷ್ಯಾ ರಾಷ್ಟ್ರಗಳಾದ ಕಾಂಬೋಡಿಯಾ ಮತ್ತು ಥಾಯ್ಲೆಂಡ್ ನಡುವೆ ಗಡಿ ವಿವಾದ ತೀವ್ರಗೊಂಡು ಕಳೆದ ಜುಲೈನಲ್ಲಿ ಐದು ದಿನ ಶಸ್ತ್ರಾಸ್ತ್ರ ಸಂಘರ್ಷ ನಡೆದಿತ್ತು. ಸಂಘರ್ಷದಲ್ಲಿ ಹಲವು ಸೈನಿಕರು ಮತ್ತು ನಾಗರಿಕರು ಮೃತಪಟ್ಟಿದ್ದರು.
ಕಳೆದ ತಿಂಗಳು ಮಲೇಷ್ಯಾದಲ್ಲಿ ನಡೆದಿದ್ದ ಆಸಿಯಾನ್ ಶೃಂಗಸಭೆಯಲ್ಲಿ, ಸಮರ ನಿಲ್ಲಿಸದೇ ಇದ್ದರೆ ವ್ಯಾಪಾರ ವ್ಯವಹಾರ ಸ್ಥಗಿತಗೊಳಿಸುವುದಾಗಿ ಎರಡು ದೇಶಗಳಿಗೆ ಟ್ರಂಪ್ ಎಚ್ಚರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.