ADVERTISEMENT

ಸುಂಕ ಮರುಪಾವತಿ ಸಾಧ್ಯವೇ ಇಲ್ಲ: ಡೊನಾಲ್ಡ್‌ ಟ್ರಂಪ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 16:18 IST
Last Updated 13 ಜನವರಿ 2026, 16:18 IST
<div class="paragraphs"><p>ಡೊನಾಲ್ಡ್‌ ಟ್ರಂಪ್</p></div>

ಡೊನಾಲ್ಡ್‌ ಟ್ರಂಪ್

   

ವಾಷಿಂಗ್ಟನ್: ವಿವಿಧ ದೇಶಗಳ ಮೇಲೆ ಸುಂಕ ವಿಧಿಸಿ ಹೊರಡಿಸಲಾಗಿರುವ ಆದೇಶವನ್ನು ಒಂದು ವೇಳೆ ಸುಪ್ರೀಂ ಕೋರ್ಟ್‌ ರದ್ದು ಮಾಡಿದಲ್ಲಿ, ಅಮೆರಿಕದ ಮೇಲೆ ಭಾರಿ ಪರಿಣಾಮ ಉಂಟು ಮಾಡಲಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಸಿದ್ದಾರೆ.

‘ಹಲವು ದೇಶಗಳ ಮೇಲೆ ಭಾರಿ ಪ್ರಮಾಣದಲ್ಲಿ ಸುಂಕ ವಿಧಿಸಿ, ಸಂಗ್ರಹಿಸಿರುವ ಹಣವನ್ನು ಮರಳಿ ಕೊಡಲು ಕಷ್ಟವಾಗಲಿದೆ’ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಮಾಡಿದ್ದಾರೆ. 

ADVERTISEMENT

‘ನ್ಯಾಯಾಲಯದ ತೀರ್ಪು ವ್ಯತಿರಿಕ್ತವಾಗಿ ಬಂದರೆ ನಾವು ಗೊಂದಲಕ್ಕೆ ಒಳಗಾಗಬೇಕಾಗುತ್ತದೆ. ಭಾರಿ ಮೊತ್ತವನ್ನು ಮರುಪಾವತಿ ಮಾಡಬೇಕಾಗುತ್ತದೆ. ನಾವು ಯಾರಿಗೆ, ಯಾವಾಗ, ಎಷ್ಟು ಪಾವತಿಸಬೇಕಾಗುತ್ತದೆ ಎಂಬುವುದನ್ನು ಲೆಕ್ಕ ಹಾಕಲು ಎಷ್ಟೋ ವರ್ಷಗಳು ಬೇಕಾಗುತ್ತವೆ’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.