ವಾಷಿಂಗ್ಟನ್: ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕದಲ್ಲಿ ವಿನಾಯಿತಿ ನೀಡುವ ಯಾವುದೇ ಯೋಚನೆಯನ್ನು ಹೊಂದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಮುಖ ಪಾಲುದಾರರಿಂದ ವ್ಯಾಪಾರ ವಹಿವಾಟಿನಲ್ಲಿ ಪ್ರತಿರೋಧ ಎದುರಾಗುವ ಸಾಧ್ಯತೆ ಇದ್ದರೂ ಉಕ್ಕು ಹಾಗೂ ಅಲ್ಯೂಮಿನಿಯಂ ಮೇಲಿನ ಆಮದು ಸುಂಕವನ್ನು ಇಳಿಸದೇ ಇರಲು ನಿರ್ಧರಿಸಲಾಗಿದೆ’ ಎಂದರು.
‘ಏ.2 ನಮ್ಮ ದೇಶಕ್ಕೆ ವಿಮೋಚನಾ ದಿನವಾಗಿದೆ. ಈಗಾಗಲೇ ನಮ್ಮ ದೇಶಕ್ಕೆ ಶತಕೋಟಿಗಟ್ಟಲೆ ಡಾಲರ್‌ನಷ್ಟು ಆರ್ಥಿಕ ಸಂಪತ್ತು ಹರಿದುಬಂದಿದೆ. ಏ.2ರಿಂದ ಇನ್ನೂ ದೊಡ್ಡ ಪ್ರಮಾಣದಲ್ಲಿ ಹಣ ಹರಿದುಬರಲಿದೆ’ ಎಂದು ಹೇಳಿದರು.
ಉಕ್ಕು, ಅಲ್ಯೂಮಿನಿಯಂ ಮೇಲೆ ಟ್ರಂಪ್ ಜನವರಿಯಿಂದ ಶೇ 25ರಷ್ಟು ಆಮದು ಸುಂಕ ವಿಧಿಸಿದ್ದಾರೆ. ಈ ಬೆಳವಣಿಗೆಯು ಜಾಗತಿಕ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.