ವಾಷಿಂಗ್ಟನ್: ರಷ್ಯಾ ಮತ್ತು ಉಕ್ರೇನ್ ‘ಶೀಘ್ರವೇ’ ಕದನ ವಿರಾಮ ಮಾತುಕತೆ ಆರಂಭಿಸಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದರು.
ಮೂರು ವರ್ಷಗಳಿಂದ ನಡೆಯುತ್ತಿರುವ ಕದನವನ್ನು ಅಂತ್ಯಗೊಳಿಸುವ ಸಂಬಂಧ ರಷ್ಯಾ ಮತ್ತು ಉಕ್ರೇನ್‌ನ ನಾಯಕರೊಂದಿಗೆ ಪ್ರತ್ಯೇಕವಾಗಿ ದೂರವಾಣಿ ಮೂಲಕ ಮಾತುಕತೆ ನಡೆಸಿದ ನಂತರ ಹೀಗೆ ಹೇಳಿದರು.
ಮಾತುಕತೆ ಎಂದಿನಿಂದ ಆರಂಭವಾಗಲಿದೆ ಅಥವಾ ಈ ಸಂದರ್ಭದಲ್ಲಿ ಯಾರು ಯಾರು ಭಾಗಿಯಾಗಲಿದ್ದಾರೆ ಎಂಬ ಬಗ್ಗೆ ತಕ್ಷಣಕ್ಕೆ ಮಾಹಿತಿ ಲಭ್ಯವಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.