ADVERTISEMENT

ಅಮೆರಿಕ: ಚೀನಾದ ವಿಡಿಯೊ ಆ್ಯಪ್‌ ಟಿಕ್‌ಟಾಕ್‌ ನಿಷೇಧಿಸಿ ಆದೇಶ ಹೊರಡಿಸಿದ ಟ್ರಂಪ್‌

ಏಜೆನ್ಸೀಸ್
Published 7 ಆಗಸ್ಟ್ 2020, 21:12 IST
Last Updated 7 ಆಗಸ್ಟ್ 2020, 21:12 IST
ಟ್ರಂಪ್‌
ಟ್ರಂಪ್‌   

ವಾಷಿಂಗ್ಟನ್‌: ಚೀನಾ ಮೂಲದ ಟಿಕ್‌ಟಾಕ್‌ ಮತ್ತು ವೀಚಾಟ್‌ ಆ್ಯಪ್‌ಗಳನ್ನು ನಿಷೇಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಗುರುವಾರ‌ ಸಹಿ ಹಾಕಿದ್ಧಾರೆ.

ಈ ನಿಷೇಧವು 45 ದಿನಗಳಲ್ಲಿ ಜಾರಿಗೆ ಬರಲಿದೆ ಎಂದು ಟ್ರಂಪ್ ಸಹಿ ಮಾಡಿರುವ ಎರಡು ಪ್ರತ್ಯೇಕ ಕಾರ್ಯಕಾರಿ ಆದೇಶಗಳಲ್ಲಿ ತಿಳಿಸಿದ್ದಾರೆ.

ಟಿಕ್‌ ಟಾಕ್‌ ಆ್ಯಪ್‌ ಮೂಲಕ ಅಮೆರಿಕದ ಪ್ರಜೆಗಳ ಖಾಸಗಿ ಮಾಹಿತಿಗಳನ್ನು ಕದಿಯಲಾಗುತ್ತಿದೆ. ಈ ಆ್ಯಪ್‌ಗಳನ್ನು ಬಳಸುವುದರಿಂದ ದೇಶದ ಭದ್ರತೆ ಮತ್ತು ವಿದೇಶಾಂಗ ನೀತಿ ಮತ್ತು ಆರ್ಥಿಕತೆಯ ಮೇಲೂ ಪರಿಣಾಮ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಚೀನಾ ಆ್ಯಪ್‌ ಬಳಕೆಯ ಅಪಾಯಗಳನ್ನು ಅರಿತು ಆಸ್ಟ್ರೇಲಿಯಾ ಮತ್ತು ಭಾರತ ಸೇರಿದಂತೆ ಇತರ ದೇಶಗಳು ಟಿಕ್‌ಟಾಕ್ ಮತ್ತು ವೀಚಾಟ್ ಬಳಕೆಯನ್ನು ನಿರ್ಬಂಧಿಸಲು ಪ್ರಾರಂಭಿಸಿವೆ. ಅಮೆರಿಕದ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಟಿಕ್‌ಟಾಕ್‌‌ ಮತ್ತು ವೀಚಾಟ್‌ ಮಾಲೀಕರ ವಿರುದ್ಧ ಆಕ್ರಮಣಕಾರಿ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ’ ಎಂದು ಟ್ರಂಪ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.