ADVERTISEMENT

ಅಮೆರಿಕ: ಲಿಂಗತ್ವ ಅಲ್ಪಸಂಖ್ಯಾತರಿಗೆ ಸೇನೆಯಲ್ಲಿ ನಿಷೇಧ ಸಾಧ್ಯತೆ

ಏಜೆನ್ಸೀಸ್
Published 28 ಜನವರಿ 2025, 13:35 IST
Last Updated 28 ಜನವರಿ 2025, 13:35 IST
ಡೊನಾಲ್ಡ್ ಟ್ರಂಪ್
ಡೊನಾಲ್ಡ್ ಟ್ರಂಪ್   

ವಾಷಿಂಗ್ಟನ್‌: ಸೇನೆಯ ನಿಯಮಾವಳಿಗಳನ್ನು ಪರಿಷ್ಕರಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೋಮವಾರ ಸಹಿ ಹಾಕಿದ್ದು, ಲಿಂಗತ್ವ ಅಲ್ಪಸಂಖ್ಯಾತರನ್ನು ಮುಂದಿನ ದಿನಗಳಲ್ಲಿ ಸೇನೆಗೆ ನೇಮಕ ಮಾಡಿಕೊಳ್ಳುವುದನ್ನು ನಿಷೇಧಿಸುವ ಸಾಧ್ಯತೆ ಇದೆ.

ಕೋವಿಡ್‌–19 ಲಸಿಕೆ ಪಡೆಯಲು ನಿರಾಕರಿಸಿದ್ದಕ್ಕಾಗಿ, ಸ್ವಯಂಪ್ರೇರಣೆಯಿಂದ ಸೇವೆಯಿಂದ ಹೊರಹೋಗಿದ್ದ ಸೈನಿಕರನ್ನು ಪುನಃ ನೇಮಿಸಿಕೊಳ್ಳುವಂತೆಯೂ ಆದೇಶ ಹೊರಡಿಸಿದ್ದಾರೆ.

ಈ ಆದೇಶಗಳನ್ನು ಯಾವ ರೀತಿ ಅನುಷ್ಠಾನಗೊಳಿಸಲಾಗುವುದು ಎಂಬುದನ್ನು ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್‌ ವಿವರಿಸಲಿದ್ದಾರೆ ಎನ್ನಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.