ಡೊನಾಲ್ಡ್ ಟ್ರಂಪ್
ರಾಯಿಟರ್ಸ್ ಚಿತ್ರ
ವೆಸ್ಟ್ ಪಾಮ್ ಬೀಚ್ (ಅಮೆರಿಕ): ಐವಿಎಫ್ (ಫಲವತ್ತತೆ) ಸೌಲಭ್ಯದ ವೆಚ್ಚವನ್ನು ತಗ್ಗಿಸುವ ಉದ್ದೇಶದ ಕಾರ್ಯಾದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದು ಆಡಳಿತದಲ್ಲಿ ಪಾರದರ್ಶಕತೆ ತರಲು ಮತ್ತು ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಲು ಮುಂದಾಗಿದ್ದಾರೆ.
ಮತ್ತೊಂದು ಆದೇಶದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿರುವ ಲೋಪಗಳ ಬಗ್ಗೆ ಹೇಳಲಾಗಿದೆ. ಆಡಳಿತ ನಿರ್ವಹಣೆ ಮತ್ತು ಬಜೆಟ್ ಮೇಲ್ವಿಚಾರಣೆಯ ಬಗ್ಗೆಯೂ ವಿವರಿಸಲಾಗಿದೆ. ‘ಅನಗತ್ಯ ವೆಚ್ಚ, ವಂಚನೆ ಹಾಗೂ ದುರ್ಬಳಕೆ’ ತಡೆಯುವುದನ್ನು ಇದರಲ್ಲಿ ಉಲ್ಲೇಖಿಸಲಾಗಿದೆ.
ಉಕ್ರೇನ್– ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸಲು ತನಗೆ ಉತ್ತಮ ಅವಕಾಶ ಇದೆ ಎಂದು ಹೇಳಿರುವ ಟ್ರಂಪ್, ಉಕ್ರೇನ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯುದ್ಧ ಕೊನೆಗೊಳಿಸಲು ಅಮೆರಿಕ ಮತ್ತು ರಷ್ಯಾ ಮಾತುಕತೆ ಆರಂಭಿಸಿವೆ ಎಂಬುದನ್ನು ಅಲ್ಲಗಳೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.