ವಾಷಿಂಗ್ಟನ್: ನೀತಿಗಳಲ್ಲಿ ಬದಲಾವಣೆ ಮಾಡಿ ಶ್ವೇತಭವನ ಹೊರಡಿಸಿದ್ದ ಆದೇಶ ತಿರಸ್ಕರಿಸಿರುವ ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ನೀಡಿರುವ ತೆರಿಗೆ ವಿನಾಯಿತಿ ಸೌಲಭ್ಯ ಹಿಂಪಡೆಯುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಎಚ್ಚರಿಕೆ ನೀಡಿದ್ದಾರೆ.
‘ಶ್ವೇತಭವನದ ಆದೇಶಗಳನ್ನು ಪಾಲಿಸಬೇಕು. ವಿದ್ಯಾರ್ಥಿಗಳು ಮತ್ತು ಬೋಧಕರ ಆಯ್ಕೆ ಸೇರಿ ತನ್ನ ಕಾರ್ಯವೈಖರಿಯನ್ನು ಬದಲಾಯಿಸಿಕೊಳ್ಳಬೇಕು. ಇಲ್ಲದಿದ್ದರೆ, ಹಾರ್ವರ್ಡ್ ವಿ.ವಿಯನ್ನು ಒಂದು ರಾಜಕೀಯ ಪಕ್ಷವೆಂದು ಪರಿಗಣಿಸಿ, ತೆರಿಗೆ ವಿಧಿಸಲಾಗುವುದು’ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.
‘ವಿ.ವಿ ತನ್ನ ಸ್ವಾತಂತ್ರ್ಯ ಹಾಗೂ ಸಾಂವಿಧಾನಿಕ ಹಕ್ಕುಗಳಿಗೆ ಸಂಬಂಧಿಸಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರವಾಗಿ ಸರ್ಕಾರದ ನಿಲುವುಗಳನ್ನು ವಿರೋಧಿಸುವೆ‘ ಎಂದು ವಿ.ವಿ ಅಧ್ಯಕ್ಷ ಅಲನ್ ಗಾರ್ಬರ್ ಅವರು ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.