ಉಗ್ರರು
ಪೇಶಾವರ: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಪಾಕಿಸ್ತಾನದ ಸೇನಾ ಸಿಬ್ಬಂದಿ ಹಾಗೂ ನಿಷೇಧಿತ ಉಗ್ರ ಸಂಘಟನೆ ಟಿಟಿಪಿಯ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ 19 ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಪಾಕ್‌ನ 11 ಮಂದಿ ಸೈನಿಕರೂ ಮೃತಪಟ್ಟಿದ್ದಾರೆ.
ಫಿತಾನ್ ಅಲ್ ಕವಾರಿಜ್ ಎಂದು ಗುರುತಿಸಿಕೊಳ್ಳುವ ತೆಹ್ರೀಕ್–ಇ–ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ)ಉಗ್ರ ಸಂಘಟನೆಯ ಭಯೋತ್ಪಾದಕರು ಆಫ್ಗನ್ ಗಡಿ ಸಮೀಪದ ಒರಾಕ್ಜೈ ಜಿಲ್ಲೆಯಲ್ಲಿ ಅಡಗಿರುವ ಬಗ್ಗೆ ಗುಪ್ತಚರ ಮಾಹಿತಿ ಲಭ್ಯವಾದ ಕಾರಣ ಸೇನಾಪಡೆ ಕಾರ್ಯಾಚರಣೆ ಆರಂಭಿಸಿದೆ.
ಅಕ್ಟೋಬರ್ 7ರ ತಡರಾತ್ರಿ ಶುರುವಾಗಿ ಅ.8ರ ಬೆಳಗ್ಗಿನ ಜಾವದವರೆಗೆ ನಡೆದ ಕಾರ್ಯಾಚರಣೆಯಲ್ಲಿ ತೀವ್ರ ಗುಂಡಿನ ಚಕಮಕಿ ನಡೆದಿದೆ. ಮೃತಪಟ್ಟ ಸೈನಿಕರ ಪೈಕಿ ಲೆಫ್ಟಿನೆಂಟ್ ಕರ್ನಲ್ ಹಾಗೂ ಮೇಜರ್ ಕೂಡ ಸೇರಿದ್ದಾರೆ ಎಂದು ಪಾಕ್ ಸೇನೆಯ ಮಾಧ್ಯಮ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.