ಅಗ್ನಿ ಅವಘಡ
(ಸಾಂದರ್ಭಿಕ ಚಿತ್ರ)
ಅಂಕಾರಾ: ವಾಯವ್ಯ ಟರ್ಕಿಯ ಪ್ರಸಿದ್ಧ ಸ್ಕಿ ರೆಸಾರ್ಟ್‌ನ ಹೋಟೆಲ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.
ಘಟನೆ ಸಂಬಂಧ ಹೋಟೆಲ್‌ನ ಮಾಲೀಕ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಟರ್ಕಿಯ ಗೃಹ ಸಚಿವ ಆಲಿ ಎರ್ಲಿಕಯಾ ತಿಳಿಸಿದ್ದಾರೆ.
45 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಎರ್ಲಿಕಯಾ ಮಾಹಿತಿ ನೀಡಿದ್ದಾರೆ.
’ರೆಸ್ಟೊರೆಂಟ್‌ನ 12ನೇ ಮಹಡಿಯಲ್ಲಿರುವ ಗ್ರಾಂಡ್ ಕರ್ತಾಲ್ ಹೋಟೆಲ್‌ನಲ್ಲಿ ಮಂಗಳವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಘಟನೆ ಸಂದರ್ಭದಲ್ಲಿ 234 ಅತಿಥಿಗಳು ಹೋಟೆಲ್‌ನಲ್ಲಿ ಇದ್ದರು. ಗಾಬರಿಗೊಂಡು ಕಟ್ಟಡದಿಂದ ಜಿಗಿದಿದ್ದರಿಂದ ಇಬ್ಬರು ಸಾವಿಗೀಡಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದರು.
ಅಗ್ನಿ ಅವಘಡಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಗಾಗಿ ಆರು ಪ್ರಾಸಿಕ್ಯೂಟರ್‌ಗಳನ್ನು ಸರ್ಕಾರ ನೇಮಿಸಿದೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.