ADVERTISEMENT

ಟರ್ಕಿ ಭೂಕಂಪ: ಮೃತರ ಸಂಖ್ಯೆ 76ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 4:50 IST
Last Updated 2 ನವೆಂಬರ್ 2020, 4:50 IST
ಸಾಂದರ್ಭಿಕ ಚಿತ್ರ – ಎಎನ್ಐ ಚಿತ್ರ
ಸಾಂದರ್ಭಿಕ ಚಿತ್ರ – ಎಎನ್ಐ ಚಿತ್ರ   

ಇಜ್ಮಿರ್‌ (ಟರ್ಕಿ): ಟರ್ಕಿಯ ಕರಾವಳಿ ಮತ್ತು ಗ್ರೀಕ್ ದ್ವೀಪ ಸಮೋಸ್ ಮಧ್ಯಭಾಗದಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ತುರ್ತು ನಿರ್ವಹಣಾ ಪ್ರಾಧಿಕಾರ ಸೋಮವಾರ ತಿಳಿಸಿದೆ.

ಏಜಿಯನ್ ಈಶಾನ್ಯ ಭಾಗದ ಸಮೋಸ್‌ನಲ್ಲಿ ಶುಕ್ರವಾರ ಮಧ್ಯಾಹ್ನ 6.9 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಒಟ್ಟು 962 ಜನರು ಗಾಯಗೊಂಡಿದ್ದು, ಈ ಪೈಕಿ 743 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 219 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಾಶ್ರಿತರಿಗಾಗಿ ಈವರೆಗೆ 1,864 ಟೆಂಟ್‌ಗಳನ್ನು ಸ್ಥಾಪಿಸಲಾಗಿದ್ದು, ಇನ್ನೂ 2,038 ನಿರ್ಮಿಸಲಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.

ADVERTISEMENT

ಭೂಕಂಪದಿಂದಾಗಿ ಕುಸಿದುಬಿದ್ದಿರುವ ಕಟ್ಟಡಗಳ ಅವಶೇಷಗಳಡಿಯಿಂದ 105 ಮಂದಿಯನ್ನು ರಕ್ಷಿಸಲಾಗಿದೆ ಎಂದೂ ಪ್ರಾಧಿಕಾರ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.