ADVERTISEMENT

‘ಅಫ್ಗಾನಿಸ್ತಾನದಲ್ಲಿ ಬಲಪ್ರಯೋಗದ ಮೂಲಕ ರಚನೆಯಾಗುವ ಸರ್ಕಾರಕ್ಕೆ ಮಾನ್ಯತೆ ಇಲ್ಲ’

ಕತಾರ್‌ನಲ್ಲಿ ನಡೆದ ಸಮಾವೇಶದಲ್ಲಿ ಭಾರತ ಸೇರಿ 12 ರಾಷ್ಟ್ರಗಳ ನಿರ್ಧಾರ

ಪಿಟಿಐ
Published 13 ಆಗಸ್ಟ್ 2021, 10:08 IST
Last Updated 13 ಆಗಸ್ಟ್ 2021, 10:08 IST
ಕತಾರ್‌ನ ದೋಹಾದಲ್ಲಿ ನಡೆದ ಶಾಂತಿ ಮಾತುಕತೆ ಸಭೆಯಲ್ಲಿ ಅಫ್ಗಾನಿಸ್ತಾನದ ರಾಷ್ಟ್ರೀಯ ಉನ್ನತ ಮಂಡಳಿ ಅಧ್ಯಕ್ಷ ಅಬ್ದುಲ್ಲಾ ಅಬ್ದುಲ್ಲಾ ಹಾಗೂ ಇತರ ಜಾಗತಿಕ ನಾಯಕರು ಪಾಲ್ಗೊಂಡಿದ್ದರು –ರಾಯಿಟರ್ಸ್ ಚಿತ್ರ
ಕತಾರ್‌ನ ದೋಹಾದಲ್ಲಿ ನಡೆದ ಶಾಂತಿ ಮಾತುಕತೆ ಸಭೆಯಲ್ಲಿ ಅಫ್ಗಾನಿಸ್ತಾನದ ರಾಷ್ಟ್ರೀಯ ಉನ್ನತ ಮಂಡಳಿ ಅಧ್ಯಕ್ಷ ಅಬ್ದುಲ್ಲಾ ಅಬ್ದುಲ್ಲಾ ಹಾಗೂ ಇತರ ಜಾಗತಿಕ ನಾಯಕರು ಪಾಲ್ಗೊಂಡಿದ್ದರು –ರಾಯಿಟರ್ಸ್ ಚಿತ್ರ   

ವಾಷಿಂಗ್ಟನ್‌: ಅಫ್ಗಾನಿಸ್ತಾನದಲ್ಲಿ ತಾಲಿಬಾನ್‌ ಅಟ್ಟಹಾಸ ಹೆಚ್ಚುತ್ತಿರುವ ನಡುವೆಯೇ, ಬಲ ಪ್ರಯೋಗದ ಮೂಲಕ ರಚನೆಯಾಗುವ ಯಾವುದೇ ಸರ್ಕಾರಕ್ಕೆ ಮಾನ್ಯತೆ ನೀಡದಿರಲು ಭಾರತ, ಅಮೆರಿಕ ಹಾಗೂ ಚೀನಾ ಸೇರಿದಂತೆ 12 ರಾಷ್ಟ್ರಗಳು ನಿರ್ಧರಿಸಿವೆ.

ವಿಶ್ವಸಂಸ್ಥೆ ಹಾಗೂ ಐರೋಪ್ಯ ಒಕ್ಕೂಟ ಸಹ ಈ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿವೆ.ಅಫ್ಗಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕತಾರ್‌ನದೋಹಾದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಪಾಲ್ಗೊಂಡಿದ್ದ ರಾಷ್ಟ್ರಗಳು ಈ ಮಹತ್ವದ ನಿರ್ಧಾರಕ್ಕೆ ಬಂದಿವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಹೇಳಿದೆ.

ಉಜ್ಬೆಕಿಸ್ತಾನ, ಪಾಕಿಸ್ತಾನ, ಬ್ರಿಟನ್, ಜರ್ಮನಿ, ನಾರ್ವೆ, ತಜಕಿಸ್ತಾನ, ಟರ್ಕಿ ಹಾಗೂ ತುರ್ಕ್‌ಮೆನಿಸ್ತಾನ ರಾಷ್ಟ್ರಗಳ ಪ್ರತಿನಿಧಿಗಳು ಸಹ ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ADVERTISEMENT

‘ಯುದ್ಧಪೀಡಿತ ಅಫ್ಗಾನಿಸ್ತಾನದಲ್ಲಿ ಶಾಂತಿ ನೆಲೆಸುವಂತೆ ಮಾಡುವ ಪ್ರಯತ್ನಗಳಿಗೆ ವೇಗ ನೀಡಬೇಕು ಎಂಬುದಕ್ಕೆ ಎಲ್ಲ ದೇಶಗಳ ಪ್ರತಿನಿಧಿಗಳು ಸಹಮತ ವ್ಯಕ್ತಪಡಿಸಿದರು’ ಎಂದು ವಿದೇಶಾಂಗ ಇಲಾಖೆ ವಕ್ತಾರ ನೆಡ್‌ ಪ್ರೈಸ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.