ನ್ಯೂಯಾರ್ಕ್: ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ ಇಬ್ಬರು ಭಾರತೀಯರನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದಾರೆ.
‘ಮ್ಯೇನ್ ರಾಜ್ಯದಲ್ಲಿ ಆಗಸ್ಟ್ 1ರಂದು ಕಾಲ್ನಡಿಗೆಯಲ್ಲಿ ಅಂತರರಾಷ್ಟ್ರೀಯ ಗಡಿ ಪ್ರವೇಶಿಸಿದ ಇಬ್ಬರು ಭಾರತೀಯ ಪ್ರಜೆಗಳನ್ನು ಹೌಲ್ಟೌನ್ ವಲಯದ ಗಡಿ ಕಾವಲು ಸಿಬ್ಬಂದಿ ಬಂಧಿಸಿದ್ದಾರೆ. ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅಮೆರಿಕ ಕಸ್ಟಮ್ಸ್ ಮತ್ತು ಗಡಿ ರಕ್ಷಣಾ ಪಡೆ (ಸಿಬಿಪಿ) ತಿಳಿಸಿದೆ.
‘ಕಳೆದ ಮೂರು ವರ್ಷಗಳಲ್ಲಿ ಮ್ಯೇನ್‌ನಲ್ಲಿ ಅಕ್ರಮವಾಗಿ ಅಮೆರಿಕ ಗಡಿ ಪ್ರವೇಶಿಸಿದ ಒಟ್ಟು 15 ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ’ ಎಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.