ಸಾವು (ಪ್ರಾತಿನಿಧಿಕ ಚಿತ್ರ)
ನ್ಯೂಯಾರ್ಕ್: ಪೆನ್ಸಿಲ್ವೇನಿಯಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಗಾಯಗೊಂಡಿರುವ ಒಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
‘ಕ್ಲೀವ್‌ಲ್ಯಾಂಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಭಾರತದ ಮಾನವ್ ಪಟೇಲ್(20) ಮತ್ತು ಸೌರವ್ ಪ್ರಭಾಕರ್(23) ಅಪಘಾತದಲ್ಲಿ ಮೃತಪಟ್ಟಿದ್ದಾರೆ’ ಎಂದು ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ‘ಎಕ್ಸ್’ನಲ್ಲಿ ಸೋಮವಾರ ಪೋಸ್ಟ್ ಮಾಡಿದ್ದಾರೆ.
ಶನಿವಾರ ಬೆಳಿಗ್ಗೆ ಕಾರು ಮರಕ್ಕೆ ಗುದ್ದಿ ಬಳಿಕ ಸೇತುವೆಗೆ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.