ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ಇಸ್ರೇಲ್ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
ಬೆಂಗಳೂರು: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿಯಲ್ಲಿ ಇಸ್ರೇಲ್ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
ವಾಷಿಂಗ್ಟನ್ ಡಿ.ಸಿಯ ವಾಯವ್ಯ ಭಾಗದಲ್ಲಿರುವ ಜೆವೀಶ್ ಮ್ಯೂಸಿಯಂ ಮುಂದೆ ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ಘಟನೆಯಲ್ಲಿ ಇಸ್ರೇಲ್ ರಾಯಭಾರ ಕಚೇರಿಯ ಒಬ್ಬ ಪುರುಷ ಅಧಿಕಾರಿ ಹಾಗೂ ಒಬ್ಬ ಮಹಿಳಾ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ಎಬಿಸಿ ನ್ಯೂಸ್ ವರದಿ ಮಾಡಿದೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ಎಫ್‌ಬಿಐ ಪೊಲೀಸರು ದೌಡಾಯಿಸಿದ್ದು ಘಟನಾ ಸ್ಥಳವನ್ನು ಸುತ್ತುವರಿದಿದ್ದಾರೆ. ಹಂತಕರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಜೆವೀಶ್ ಮ್ಯೂಸಿಯಂ ಮುಂದೆ ಬುಧವಾರ ರಾತ್ರಿ ಕಾರ್ಯಕ್ರಮವೊಂದು ನಡೆದಿತ್ತು. ಈ ವೇಳೆ ಗುಂಡಿನ ದಾಳಿಯಾಗಿದೆ. ಈ ವೇಳೆ ಹಂತಕರು 'ಪ್ಯಾಲೆಸ್ಟೀನ್ ಉಳಿಸಿ' ಎಂದು ಘೋಷಣೆ ಕೂಗಿದ್ದಾರೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.