ಗುಂಡಿನ ದಾಳಿ (ಸಾಂದರ್ಭಿಕ ಚಿತ್ರ)
ಟೆಹ್ರಾನ್ (ಇರಾನ್): ಸುಪ್ರೀಂ ಕೋರ್ಟ್‌ನ ಇಬ್ಬರು ನ್ಯಾಯಮೂರ್ತಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಟೆಹ್ರಾನ್‌ನಲ್ಲಿ ಇಂದು (ಶನಿವಾರ) ನಡೆದಿದೆ. ಘಟನೆಯಲ್ಲಿ ಮತ್ತೋರ್ವ ನ್ಯಾಯಮೂರ್ತಿ ಗಾಯಗೊಂಡಿದ್ದಾರೆ ಎಂದು ನ್ಯಾಯಾಂಗದ 'ಮಿಜಾನ್' ಸುದ್ದಿ ವೆಬ್‌ಸೈಟ್ ವರದಿ ಮಾಡಿದೆ.
ಆಯತುಲ್ಲಾ ಮೊಹಮ್ಮದ್ ಮೊಘಿಶೆ ಹಾಗೂ ಅಲಿ ರಝನಿ ಹತ್ಯೆಗೀಡಾದ ನ್ಯಾಯಮೂರ್ತಿಗಳು.
ಸುಪ್ರೀಂ ಕೋರ್ಟ್‌ನ ಹೊರಗೆ ನ್ಯಾಯಮೂರ್ತಿಗಳ ಮೇಲೆ ಗುಂಡಿನ ದಾಳಿ ನಡೆಸಿದ ದಾಳಿಕೋರ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ.
ಘಟನೆಯಲ್ಲಿ ನ್ಯಾಯಮೂರ್ತಿಯೊಬ್ಬರ ಅಂಗರಕ್ಷಕ ಕೂಡ ಗಾಯಗೊಂಡಿದ್ದಾರೆ ಎಂದು ಇರಾನ್‌ನ ಮಾಧ್ಯಮಗಳು ವರದಿ ಮಾಡಿವೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.