ADVERTISEMENT

ವಿಶೇಷ ಸ್ಥಾನಮಾನ ರದ್ದತಿಗೆ ಎರಡು ವರ್ಷ: ಪಾಕ್‌ನಲ್ಲಿ ಪ್ರತಿಭಟನೆ

ಪಿಟಿಐ
Published 5 ಆಗಸ್ಟ್ 2021, 13:49 IST
Last Updated 5 ಆಗಸ್ಟ್ 2021, 13:49 IST
ಜಮ್ಮು–ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಭಾರತ ರದ್ದುಪಡಿಸಿರುವುದಕ್ಕೆ ಎರಡು ವರ್ಷಗಳು ತುಂಬಿದ ಕಾರಣ ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ‘ಕಾಶ್ಮೀರದಲ್ಲಿ ಶೋಷಣೆ ದಿನ’ದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಹಿಳೆಯರು ಪಾಲ್ಗೊಂಡಿದ್ದರು –ರಾಯಿಟರ್ಸ್‌ ಚಿತ್ರ

ಇಸ್ಲಾಮಾಬಾದ್‌: ಜಮ್ಮು–ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಎರಡು ವರ್ಷಗಳ ಹಿಂದೆ ರದ್ದುಗೊಳಿಸಿದ ಭಾರತದ ನಿರ್ಧಾರವನ್ನುಖಂಡಿಸಿ ಪಾಕಿಸ್ತಾನದಲ್ಲಿ ಗುರುವಾರ ಪ್ರತಿಭಟನೆಗಳು ನಡೆದವು.

ಪ್ರಧಾನಿ ಇಮ್ರಾನ್‌ ಖಾನ್‌, ಸೇನಾ ಮುಖ್ಯಸ್ಥ ಜನರಲ್‌ ಕಮರ್‌ ಜಾವೇದ್‌ ಬಾಜ್ವಾ ಸೇರಿದಂತೆ ಹಲವಾರು ಮುಖಂಡರು, ಎರಡು ವರ್ಷಗಳ ಹಿಂದೆ ಭಾರತ ಕೈಗೊಂಡಿದ್ದ ನಿರ್ಧಾರವನ್ನು ಖಂಡಿಸಿದರಲ್ಲದೇ, ಕಾಶ್ಮೀರ ಜನತೆಗೆ ತಮ್ಮ ಬೆಂಬಲ ಇದೆ ಎಂದು ಘೋಷಿಸಿದರು.

2019ರ ಆಗಸ್ಟ್‌ 5ರಂದು ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ್ದ ಭಾರತ, ಕಣಿವೆ ರಾಜ್ಯವನ್ನು ವಿಭಜಿಸಿ, ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ರಚಿಸಿತು. ಈ ನಡೆಯನ್ನು ವಿರೋಧಿಸಿದ್ದ ಪಾಕಿಸ್ತಾನ ನಂತರ ಭಾರತದೊಂದಿಗಿನ ಸಂಬಂಧವನ್ನು ಕಡಿದುಗೊಂಡಿತು. ವಾಣಿಜ್ಯ ಸಂಬಂಧಗಳನ್ನು ಸಹ ಅಮಾನತುಗೊಳಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.