ADVERTISEMENT

ಪಾರ್ಟಿಗೇಟ್ ಹಗರಣ: ಬ್ರಿಟನ್‌ ಪ್ರಧಾನಿ, ಚಾನ್ಸಲರ್‌ಗೆ ದಂಡ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 16:38 IST
Last Updated 12 ಏಪ್ರಿಲ್ 2022, 16:38 IST
ಬ್ರಿಟಿಷ್‌ ಪ್ರಧಾನಿ ಬೋರಿಸ್‌ ಜಾನ್ಸನ್‌
ಬ್ರಿಟಿಷ್‌ ಪ್ರಧಾನಿ ಬೋರಿಸ್‌ ಜಾನ್ಸನ್‌   

ಲಂಡನ್‌: ಪಾರ್ಟಿಗೇಟ್ ಹಗರಣಕ್ಕೆ ಸಂಬಂಧಿಸಿದಂತೆ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಹಾಗೂ ಚಾನ್ಸಲರ್‌ ರಿಷಿ ಸುನಕ್‌ಗೆ ಮೆಟ್ರೋಪಾಲಿಟನ್‌ ಪೊಲೀಸರು ದಂಡ ವಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.

‘ಕೋವಿಡ್‌ – 19 ಸಂದರ್ಭದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದ ಕಾರಣಕ್ಕಾಗಿ ಪೊಲೀಸರು ನಿಗದಿತ ದಂಡ ಸೂಚನೆಯನ್ನು ವಿಧಿಸಲಿದ್ದಾರೆ.ಈಗಾಗಲೇ ಪೊಲೀಸರು ಈ ಸಂಬಂಧ ಬೋರಿಸ್ ಹಾಗೂ ರಿಷಿ ಅವರಿಗೆ ಸೂಚನೆ ನೀಡಿದ್ದಾರೆ’ ಎಂದು ಡೌನಿಂಗ್‌ ಸ್ಟ್ರೀಟ್‌ ವಕ್ತಾರಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT