ಬ್ರಿಟನ್ ಪ್ರಧಾನಿ ಸುನಕ್–ಸಿಂಗ್
ಲಂಡನ್: ಬ್ರಿಟನ್ ಪ್ರವಾಸ ಕೈಗೊಂಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇಂದು (ಗುರುವಾರ) ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪ್ರಧಾನಿ ರಿಷಿ ಸುನಕ್, ರಕ್ಷಣಾ ಸಚಿವ ಗ್ರಾಂಟ್ ಶಾಪ್ಸ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡೇವಿಡ್ ಕ್ಯಾಮರೂನ್ ಅವರೊಂದಿಗೆ ಮಾತುಕತೆ ನಡೆಸಿದರು. ಇದೇ ವೇಳೆ ರಕ್ಷಣಾ ಕ್ಷೇತ್ರದಲ್ಲಿ ಉಭಯ ದೇಶಗಳ ಪಾಲುದಾರಿಕೆ, ಯುದ್ಧ ವಿಮಾನಗಳು ಮತ್ತು ಇತರೆ ಸೇನಾ ಸಲಕರಣೆಗಳನ್ನು ಜಂಟಿಯಾಗಿ ಅಭಿವೃದ್ಧಿಪಡಿಸುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಭಾರತ–ಬ್ರಿಟನ್ ದ್ವಿಪಕ್ಷೀಯ ಸಂಬಂಧ ವೃದ್ಧಿ ಉದ್ದೇಶದಿಂದ ಕೈಗೊಳ್ಳಲಾಗಿರುವ ಈ ಭೇಟಿ ಸಂದರ್ಭದಲ್ಲಿ ಕೈಗಾರಿಕಾ ಸಹಕಾರ, ಇಂಡೊ–ಪೆಸಿಫಿಕ್, ಪಶ್ಚಿಮ ಏಷ್ಯಾ ಮತ್ತು ಉಕ್ರೇನ್ ಸ್ಥಿತಿಗತಿ ಕುರಿತೂ ಚರ್ಚೆ ನಡೆಸಿದ್ದಾರೆ.
ಭಾರತದ ರಕ್ಷಣಾ ಸಚಿವರೊಬ್ಬರು 22 ವರ್ಷಗಳ ನಂತರ ಬ್ರಿಟನ್‌ಗೆ ಭೇಟಿ ನೀಡಿದಂತಾಗಿದೆ. ಸಚಿವರ ಜೊತೆ ರಕ್ಷಣಾ ಇಲಾಖೆ, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಹಿರಿಯ ಅಧಿಕಾರಿಗಳೂ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.