ADVERTISEMENT

ಬ್ರಿಟನ್ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವುದೇ ನನ್ನ ಮೊದಲ ಆದ್ಯತೆ: ಸುನಕ್

ಪಿಟಿಐ
Published 16 ನವೆಂಬರ್ 2022, 10:52 IST
Last Updated 16 ನವೆಂಬರ್ 2022, 10:52 IST
ಸುನಕ್
ಸುನಕ್   

ಲಂಡನ್: ಹಾಳಾಗಿರುವ ಬ್ರಿಟನ್ ದೇಶದ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವುದೇ ನನ್ನ ಮೊದಲ ಆದ್ಯತೆ ಎಂದು ಬ್ರಿಟನ್ ನೂತನ ಪ್ರಧಾನ ಮಂತ್ರಿ ರಿಷಿ ಸುನಕ್ ಹೇಳಿದ್ದಾರೆ.

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್‌ನಲ್ಲಿ ಉಂಟಾಗಿರುವ ಆರ್ಥಿಕ ದುಸ್ಥಿತಿಯನ್ನು ನಿಭಾಯಿಸಲು ನಾವು ಸೆಣಸಾಡಬೇಕಿದೆ. ಇದನ್ನು ನಾವು ಖಂಡಿತ ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಇತ್ತೀಚಿನ ಅಂಕಿ–ಅಂಶಗಳ ಪ್ರಕಾರ ಬ್ರಿಟನ್‌ನ ಹಣದುಬ್ಬರ ಕಳೆದ 40 ವರ್ಷಗಳಲ್ಲೇ ಅತ್ಯಧಿಕವಾಗಿದೆ ಎಂದು ತಿಳಿದು ಬಂದಿದೆ.

ADVERTISEMENT

ಸುಸ್ಥಿರ ಆರ್ಥಿಕ ಅಭಿವೃದ್ಧಿಗೆ ನಾವು ನಿರ್ಣಾಯಕ ನಿರ್ಧಾರ ತೆಗೆದುಕೊಳ್ಳುವ ಸಂದರ್ಭದಲ್ಲಿದ್ದೇವೆ. ಇದನ್ನು ನಾವು ಖಂಡಿತವಾಗಿಯೂ ಮಾಡುತ್ತೇವೆ. ಅಲ್ಲದೇ ನಮ್ಮ ಹೊಸ ನಿರ್ಧಾರಗಳು ಹಣದುಬ್ಬರವನ್ನು ಕಟ್ಟಿಹಾಕುತ್ತದೆ ಎಂದು ಅವರು ತಿಳಿಸಿದ್ದಾರೆ.

ರಿಷಿ ಸುನಕ್ ಅವರು ನವೆಂಬರ್ 17 ರಂದು ಬ್ರಿಟನ್‌ನ ಬಜೆಟ್ ಮಂಡಿಸಲಿದ್ದು, ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದೆ.

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್‌, ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್,ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರೊಂದಿಗೆ ಮಾತುಕತೆ ನಡೆಸಿ, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಚರ್ಚಿಸಿದರು ಎಂದು ಪಿಎಂಒ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.