

ಕೀವ್: ‘ಉಕ್ರೇನ್ ಮೇಲೆ ರಷ್ಯಾವು ಮಂಗಳವಾರ ರಾತ್ರಿ ಇಡೀ ಡ್ರೋನ್ ಮತ್ತು ಕ್ಷಿಪಣಿಗಳ ದಾಳಿ ನಡೆಸಿದ್ದು, 10 ಮಂದಿ ಮೃತಪಟ್ಟಿದ್ದಾರೆ’ ಎಂದು ಉಕ್ರೇನ್ ಅಧಿಕಾರಿಗಳು ಬುಧವಾರ ಮಾಹಿತಿ ನೀಡಿದರು. ಯುದ್ಧ ಅಂತ್ಯಗೊಳಿಸುವ ಸಂಬಂಧ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಟರ್ಕಿ ಪ್ರವಾಸಲ್ಲಿದ್ದ ವೇಳೆ ಈ ದಾಳಿ ನಡೆದಿದೆ.
‘9 ಅಂತಸ್ತಿನ ಎರಡು ಕಟ್ಟಡಗಳ ಮೇಲೆ ದಾಳಿ ನಡೆಸಲಾಗಿದೆ. ಕಟ್ಟಡಗಳ ಅಡಿಯಲ್ಲಿ ಸಿಲುಕಿಕೊಂಡವರಿಗಾಗಿ ಬುಧವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಲಾಯಿತು. 12 ಮಕ್ಕಳೂ ಸೇರಿ ಕನಿಷ್ಠ 37 ಮಂದಿ ಗಾಯಗೊಂಡಿದ್ದಾರೆ’ ಎಂದರು.
‘ಗುಪ್ತ ಕಾರ್ಯಾಚರಣೆಗೆ ಬಳಸಿಕೊಳ್ಳುವ ಡ್ರೋನ್‌ಗಳಲ್ಲಿ 476 ಬಾರಿ, 48 ವಿವಿಧ ರೀತಿಯ ಕ್ಷಿಪಣಿಗಳನ್ನು ಬಳಸಿ ರಷ್ಯಾವು ದಾಳಿ ನಡೆಸಿದೆ’ ಎಂದು ಉಕ್ರೇನ್‌ನ ವಾಯು ಪಡೆ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.