
ಉಕ್ರೇನ್ ಮೇಲೆ ರಷ್ಯಾದಿಂದ ಭಾರಿ ದಾಳಿ
(ಕಡತ ಚಿತ್ರ)
ಕೀವ್ (ಉಕ್ರೇನ್): ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ಪಡೆಗಳು ಇಂದು (ಶನಿವಾರ) ಮುಂಜಾನೆ ಭಾರಿ ದಾಳಿ ನಡೆಸಿವೆ. ನಗರದ ಹಲವೆಡೆ ಸ್ಫೋಟದ ಸದ್ದು ಕೇಳಿಬಂದಿದೆ. ಸದ್ಯ ವಾಯು ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಉಕ್ರೇನ್ ಸೇನೆ ಹೇಳಿದೆ.
ರಷ್ಯಾ ಮತ್ತು ಉಕ್ರೇನ್ ನಡುವೆ ಸುಮಾರು ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವ ಪ್ರಸ್ತಾವಿತ ಒಪ್ಪಂದದ ವಿವರಗಳನ್ನು ರೂಪಿಸಲು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹಾಗೂ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಣ ಸಭೆಗೆ ಎರಡು ದಿನ ಇರುವಾಗ ಈ ದಾಳಿ ನಡೆದಿದೆ.
ನಗರದಲ್ಲಿ ವಾಯು ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಯುದ್ದ ನೌಕೆ ಮತ್ತು ಖಂಡಾಂತರ ಕ್ಷಿಪಣಿಗಳನ್ನು ನಿಯೋಜಿಸಲಾಗುತ್ತಿದೆ ಎಂದು ಸೇನೆ ಹೇಳಿದೆ.
ಇನ್ನು ದಾಳಿ ಬಗ್ಗೆ ರಷ್ಯಾವು ತಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.