ಕೀವ್: ಉಕ್ರೇನ್‌ನ ಸಂಸದ ಹಾಗೂ ಮಾಜಿ ಸ್ಪೀಕರ್ ಆಂಡ್ರೆ ಪರೂಬಿ (54) ಅವರನ್ನು ಲವೀವ್ ನಗರದಲ್ಲಿ ಶನಿವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯ ಹಿಂದಿನ ಕಾರಣ ಸ್ಪಷ್ಟವಾಗಿಲ್ಲ. ಗುಂಡಿನ ದಾಳಿ ನಡೆಸಿದ ವ್ಯಕ್ತಿಗಾಗಿ ಶೋಧ ನಡೆದಿದೆ ಎಂದಿದ್ದಾರೆ.
2016ರಿಂದ 2019ರವರೆಗೆ ಉಕ್ರೇನ್ ಸಂಸತ್‌ನ ಸ್ಪೀಕರ್ ಆಗಿದ್ದ ಪರೂಬಿ, 2004 ಹಾಗೂ 2014ರಲ್ಲಿ ನಡೆದಿದ್ದ ಕ್ರಾಂತಿಯ ಪ್ರಮುಖ ಬೆಂಬಲಿಗರಾಗಿದ್ದರು. ಪರೂಬಿ ಹತ್ಯೆ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವುದಾಗಿ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.