ಕೀವ್:ರಷ್ಯಾ ಸೇನೆ ಮುತ್ತಿಗೆ ಹಾಕಿರುವ ಬಂದರು ನಗರ ಮರಿಯುಪೋಲ್ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದುಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಕಳವಳ ವ್ಯಕ್ತಪಡಿಸಿದ್ದಾರೆ. ಹಾಗೆಯೇ,ರಷ್ಯಾ ಸೇನೆ ವಿರುದ್ಧ ಹೋರಾಟ ನಡೆಸುತ್ತಿರುವ ರಕ್ಷಣಾ ಪಡೆಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ತಿಳಿಸಿದ್ದಾರೆ.
ಮರಿಯುಪೋಲ್ ಸ್ಥಿತಿ ಕುರಿತು ಶನಿವಾರ ಮಾತನಾಡಿರುವ ಝೆಲೆನ್‌ಸ್ಕಿ, ನಗರವನ್ನು ಸಂಪೂರ್ಣ ನಾಶ ಮಾಡಲು ರಷ್ಯಾ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಆದರೆ, ಮರಿಯುಪೋಲ್‌ನಿಂದ ಉಕ್ರೇನ್ ಪಡೆಗಳನ್ನು ಹೊರಹಾಕಲಾಗಿದೆ ಎಂಬ ರಷ್ಯಾ ಹೇಳಿಕೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮರಿಯುಪೋಲ್ ನಗರ ಪ್ರದೇಶವನ್ನು ಉಕ್ರೇನ್ ಸೇನಾ ಪಡೆಗಳಿಂದ ಸಂಪೂರ್ಣ ವಶಕ್ಕೆ ಪಡೆದಿರುವುದಾಗಿ ರಷ್ಯಾ ಸೇನೆ ಪ್ರಕಟಿಸಿತ್ತು.
ಅಜೋವ್ ಸಮುದ್ರದ ಪ್ರಮುಖ ಬಂದರು ನಗರವಾಗಿರುವ ಮರಿಯುಪೋಲ್ ಅತ್ಯಂತ ಕೆಟ್ಟ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಎಂದು ಕ್ಸಿನ್ಹುಹಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಮೆರಿಕ ಹಾಗೂ ನ್ಯಾಟೊ ಮಿತ್ರರಾಷ್ಟ್ರಗಳ ತೀವ್ರ ವಿರೋಧದ ನಡುವೆಯೂ ರಷ್ಯಾ ಫೆ. 25ರಂದು ಉಕ್ರೇನ್ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಆರಂಭಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.