ವಿಶ್ವಸಂಸ್ಥೆ: ನಿಷೇಧಿತ ಉಗ್ರ ಸಂಘಟನೆ ಅಲ್‌ಕೈದಾ ಜೊತೆಗೆ ನೇರ ಸಂಪರ್ಕ ಹೊಂದಿರುವ ಮತ್ತು ಅದರ ಜೊತೆ ಸೇರಿ ಕೆಲಸ ಮಾಡುತ್ತಿರುವ ಆರೋಪದ ಮೇಲೆ ಪಾಕಿಸ್ತಾನದ ತೆಹ್ರಿಕ್-ಎ-ತಾಲಿಬಾನ್(ಟಿಟಿಪಿ) ಉಗ್ರ ಸಂಘಟನೆಯ ನಾಯಕ ನೂರ್ ವಾಲಿ ಮಸೂದ್‌ನನ್ನು ವಿಶ್ವಸಂಸ್ಥೆಯುಗುರುವಾರಕಪ್ಪು ಪಟ್ಟಿಗೆ ಸೇರಿಸಿದೆ.ಅಲ್ಲದೆ ಮಸೂದ್ ಆಸ್ತಿ ಮುಟ್ಟುಗೋಲು, ಪ್ರಯಾಣ ಮತ್ತು ಶಸ್ತ್ರಾಸ್ತ್ರಗಳನ್ನು ಹೊಂದುವುದಕ್ಕೆ ನಿರ್ಬಂಧ ವಿಧಿಸಿದೆ.
‘ನಿಷೇಧಿತ ಉಗ್ರ ಸಂಘಟನೆ ಅಲ್‌ಕೈದಾ ಜೊತೆ ಸೇರಿಮಸೂದ್ ಹಣಕಾಸು ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಸಂಘಟನೆಯ ಪರವಾಗಿ ಕೆಲಸ ಮಾಡುತ್ತಿದ್ದಾನೆ ಎಂಬ ಕಾರಣಕ್ಕಾಗಿ ಆತನನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದೆ’ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.