ADVERTISEMENT

ಪತ್ರಕರ್ತರ ರಕ್ಷಣೆಗೆ ಕ್ರಮ ಕೈಗೊಳ್ಳಿ: ವಿಶ್ವಸಂಸ್ಥೆ

ಪಿಟಿಐ
Published 31 ಅಕ್ಟೋಬರ್ 2022, 15:22 IST
Last Updated 31 ಅಕ್ಟೋಬರ್ 2022, 15:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವಿಶ್ವಸಂಸ್ಥೆ : ಪ‍್ರಸಕ್ತ ವರ್ಷ 70ಕ್ಕೂ ಹೆಚ್ಚು ಪತ್ರಕರ್ತರು ಹತ್ಯೆಯಾಗಿದ್ದಾರೆ, ದಾಖಲೆಯ ಸಂಖ್ಯೆಯ ಪತ್ರಕರ್ತರಿಗೆ ಬಂಧನದ ಭೀತಿ ಇದೆ. ಪತ್ರಕರ್ತರ ವಿರುದ್ಧದ ಹಿಂಸಾಚಾರ ಮತ್ತು ಸಾವು ಏರುತ್ತಲೇ ಇದೆ ಎಂದು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್‌ ಸೋಮವಾರ ಕಳವಳ ವ್ಯಕ್ತಪಡಿಸಿದರು.

ಇದೇ ವೇಳೆ, ಪತ್ರಕರ್ತರ ರಕ್ಷಣೆಗೆ ಸರ್ಕಾರಗಳು ಮತ್ತು ಅಂತಾರಾಷ್ಟ್ರೀಯ ಸಮುದಾಯ ಕ್ರಮ ತೆಗೆದುಕೊಳ್ಳಬೇಕು ಎಂದು ಕರೆ ನೀಡಿದರು.

ಪತ್ರಕರ್ತರ ಸುರಕ್ಷತೆ, ಮಾಧ್ಯಮ ಪ್ರತಿನಿಧಿಗಳಿಗೆ ಮುಕ್ತ ವಾತಾವರಣ ಕಲ್ಪಿಸಲು ಕ್ರಮಕೈಗೊಳ್ಳುವ ಬಗ್ಗೆ ವಿಶ್ವಸಂಸ್ಥೆ ಯೋಜನೆ ರೂಪಿಸುತ್ತಿದೆ ಎಂದು ಹೇಳಿದರು.

ADVERTISEMENT

2022ರಲ್ಲಿ ಮಾಧ್ಯಮ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಒಟ್ಟು 180 ರಾಷ್ಟ್ರಗಳ ಪೈಕಿ ಭಾರತ 150ನೇ ಸ್ಥಾನ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.