ವಿಶ್ವಸಂಸ್ಥೆ: ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವಂತೆ ಅಲ್ಲಿನ ಎಲ್ಲಾ ಪಕ್ಷಗಳಿಗೆ ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಕರೆ ನೀಡಿದ್ದಾರೆ.
‘ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲಾ ನಾಗರಿಕರು ಸುರಕ್ಷಿತವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಅಧಿಕಾರಿಗಳು ಹಾಗೂ ಎಲ್ಲಾ ಪಕ್ಷಗಳು ಸಹಕಾರ ನೀಡಬೇಕು’ ಎಂದು ಗುಟೆರಸ್ ಹೇಳಿಯಲ್ಲಿ ತಿಳಿಸಿದ್ದಾರೆ.
ಇದೇ 30ರಂದು ಬಾಂಗ್ಲಾದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.