ADVERTISEMENT

ಕಾಶ್ಮೀರ ವಿಷಯ ಚರ್ಚೆ ಸಾಧ್ಯತೆ

ಮುಂದಿನ ವಾರ ವಿಶ್ವಸಂಸ್ಥೆ ಸಾಮಾನ್ಯ ಸಭೆ

ಪಿಟಿಐ
Published 20 ಸೆಪ್ಟೆಂಬರ್ 2019, 19:40 IST
Last Updated 20 ಸೆಪ್ಟೆಂಬರ್ 2019, 19:40 IST
   

ವಿಶ್ವಸಂಸ್ಥೆ: ಮುಂದಿನ ವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕಾಶ್ಮೀರ ವಿಷಯ, ಮಾನವ ಹಕ್ಕುಗಳ ಪರಿಸ್ಥಿತಿ ಕುರಿತು ಮಹಾಪ್ರಧಾನ ಕಾರ್ಯದರ್ಶಿ ಅಂಟೊನಿಯೊ ಗುಟೆರಸ್‌ ಚರ್ಚೆ ನಡೆಸುವ ಸಾಧ್ಯತೆ ಇದೆ.

ವಿಶ್ವಸಂಸ್ಥೆಯ ವಕ್ತಾರ ಸ್ಟಿಪನ್ ಡುಜೆರಿಕ್‌ ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

‘ಈ ಕುರಿತು ಮಹಾಪ್ರಧಾನ ಕಾರ್ಯದರ್ಶಿ ಹಿಂದೆಯೂ ಪ್ರಸ್ತಾಪಿಸಿದ್ದಾರೆ ಈಗಲೂ ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದಾರೆ. ಸಾಮಾನ್ಯ ಸಭೆಯಲ್ಲಿ ವಿಸ್ಕೃತ ಚರ್ಚೆ ನಡೆಸುವ ಸಾಧ್ಯತೆ ಇದೆ’ ಎಂದು ಡುಜೆರಿಕ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.