ವಿಶ್ವಸಂಸ್ಥೆ : ಅಣ್ವಸ್ತ್ರ ಬಲ ಹೊಂದಿರುವ ಭಾರತ ಮತ್ತು ಪಾಕಿಸ್ತಾನ ದೇಶಗಳು ಈ ಸಂದರ್ಭದಲ್ಲಿ ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕು ಎಂದು ವಿಶ್ವಸಂಸ್ಥೆ ಮಹಾಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಒತ್ತಾಯಿಸಿದರು.
‘ಎರಡೂ ದೇಶಗಳ ನಡುವಿನ ಸಂಬಂಧ ಸಾಕಷ್ಟು ಹದಗೆಟ್ಟಿದೆ. ಈ ಸಂದರ್ಭದಲ್ಲಿ ಉಭಯ ದೇಶಗಳ ಸೇನೆಗಳು ಮುಖಾಮುಖಿ ಆಗುವುದನ್ನು ತಪ್ಪಿಸಬೇಕಾದ ಅಗತ್ಯ ಹೆಚ್ಚಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ನಡೆದ ಭಯೋತ್ಪಾದಕ ದಾಳಿಯನ್ನು ಪುನಃ ಖಂಡಿಸಿದ ಅವರು, ಯಾವುದೇ ಸಂದರ್ಭದಲ್ಲೂ ನಾಗರಿಕರ ಮೇಲಿನ ದಾಳಿಗಳು ಸ್ವೀಕಾರಾರ್ಹವಲ್ಲ ಎಂಬುದನ್ನು ಒತ್ತಿಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.