ವಿಶ್ವಸಂಸ್ಥೆ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ನಾಗರಿಕರ ಮೇಲಿನ ದಾಳಿ ಯಾವುದೇ ಸಂದರ್ಭದಲ್ಲೂ ಸ್ವೀಕಾರಾರ್ಹವಲ್ಲ ಎಂದು ಒತ್ತಿ ಹೇಳಿದ್ದಾರೆ.
ಕನಿಷ್ಠ 28 ಜನರ ಜೀವ ತೆಗೆದ ಜಮ್ಮು ಮತ್ತು ಕಾಶ್ಮೀರದ ಭಯೋತ್ಪಾದಕರ ದಾಳಿಯನ್ನು ಪ್ರಧಾನ ಕಾರ್ಯದರ್ಶಿ ಬಲವಾಗಿ ಖಂಡಿಸಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿಯವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ಗುಟೆರೆಸ್ ಸಂತಾಪ ಸೂಚಿಸಿದ್ದಾರೆ ಎಂದೂ ಅವರು ಹೇಳಿದ್ದಾರೆ..
ನಾಗರಿಕರ ಮೇಲಿನ ದಾಳಿಗಳನ್ನು ಯಾವುದೇ ಸಂದರ್ಭದಲ್ಲೂ ಒಪ್ಪಲಾಗುವುದಿಲ್ಲ ಎಂದು ಪ್ರಧಾನ ಕಾರ್ಯದರ್ಶಿ ಹೇಖಿರುವುದಾಗಿ ಡುಜಾರಿಕ್ ಹೇಳಿದ್ದಾರೆ.
ಮಂಗಳವಾರ ಮಧ್ಯಾಹ್ನ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದರು, ಹೆಚ್ಚಾಗಿ ಪ್ರವಾಸಿಗರು 26 ಜನರನ್ನು ಕೊಂದರು, ಇದು 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತ್ಯಂತ ಭೀಕರ ದಾಳಿಯಾಗಿದೆ.
ಮೃತ 28 ಜನರಲ್ಲಿ ಯುಎಇ ಮತ್ತು ನೇಪಾಳದ ಇಬ್ಬರು ವಿದೇಶಿಯರು, ಇಬ್ಬರು ಸ್ಥಳೀಯ ನಿವಾಸಿಗಳೂ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವಿನ ಸಂಖ್ಯೆಯನ್ನು ಇನ್ನೂ ಖಚಿತಪಡಿಸಿಕೊಳ್ಳಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಈ ಭಯೋತ್ಪಾದಕ ದಾಳಿಯು ಇತ್ತೀಚಿನ ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತಿದೊಡ್ಡ ದಾಳಿಯಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.