ಇಸ್ಲಾಮಾಬಾದ್: ಪುಲ್ವಾಮಾ ದಾಳಿ ನಂತರ ಭಾರತದೊಂದಿಗೆ ಸಂಬಂಧ ಸಂಪೂರ್ಣ ಹದಗೆಟ್ಟಿದ್ದು, ಉಭಯ ದೇಶಗಳ ನಡುವೆ ಮಾತುಕತೆ ಏರ್ಪಡಿಸಲು ವಿಶ್ವಸಂಸ್ಥೆಮಧ್ಯಪ್ರವೇಶಿಸಬೇಕು ಎಂದು ಪಾಕಿಸ್ತಾನ ಮನವಿ ಮಾಡಿದೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಅವರಿಗೆ ಪಾಕಿಸ್ತಾನ ವಿದೇಶಾಂಗ ಸಚಿವ ಮೊಹಮ್ಮದ್ ಖುರೇಶಿ ಈ ಕುರಿತು ಸೋಮವಾರ ಪತ್ರ ಕಳುಹಿಸಿದ್ದಾರೆ.
‘ಇದು ಬಹಳ ತುರ್ತಿನ ವಿಷಯವಾಗಿದೆ. ದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಭಾರತೀಯ ಪಡೆಗಳು ಪಾಕಿಸ್ತಾನದ ಮೇಲೆ ದಾಳಿ ಮಾಡುವ ಭೀತಿ ಇದೆ. ಈ ನಿಟ್ಟಿನಲ್ಲಿ, ಉಭಯ ದೇಶಗಳ ನಡುವಿನ ಸಂಘರ್ಷ ವಾತಾವರಣವನ್ನು ಕಡಿಮೆ ಮಾಡಿ, ಮಾತುಕತೆಗೆ ವೇದಿಕೆ ಸಿದ್ಧಗೊಳಿಸಬೇಕು’ ಎಂದು ಅವರು ವಿಶ್ವಸಂಸ್ಥೆಯನ್ನು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.