ವಿಶ್ವಸಂಸ್ಥೆ: ಸುಡಾನ್ ಹಾಗೂ ದಕ್ಷಿಣ ಸುಡಾನ್‌ನ ವಿವಾದಿತ ಗಡಿ ಪ್ರದೇಶದಲ್ಲಿ ಗಸ್ತಿನಲ್ಲಿದ್ದ ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯ ಸಿಬ್ಬಂದಿ ಹಾಗೂ ಐವರು ನಾಗರಿಕರನ್ನು ಹತ್ಯೆ ಮಾಡಲಾಗಿದೆ.
ಅಬೈ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಶಾಂತಿಪಾಲನಾ ಪಡೆಯ ಇಬ್ಬರು ಸಾವನ್ನಪ್ಪಿದಂತಾಗಿದೆ ಎಂದು ವಿಶ್ವಸಂಸ್ಥೆಯ ಉಪ ವಕ್ತಾರ ಫರಾನ್ ಹಕ್ ತಿಳಿಸಿದ್ದಾರೆ. ಇಥಿಯೋಪಿಯಾದಲ್ಲಿ ಒಬ್ಬರನ್ನು ಈಚೆಗೆ ಹತ್ಯೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.