ADVERTISEMENT

ಅಫ್ಗಾನಿಸ್ತಾನ ಪರಿಸ್ಥಿತಿ ಕುರಿತು ಯುಎನ್‌ಎಸ್‌ಸಿ ಸಭೆ ಇಂದು

ಪಿಟಿಐ
Published 16 ಆಗಸ್ಟ್ 2021, 10:36 IST
Last Updated 16 ಆಗಸ್ಟ್ 2021, 10:36 IST
.
.   

ವಿಶ್ವಸಂಸ್ಥೆ: ಅಫ್ಗಾನಿಸ್ತಾನದಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ವಿಶ್ವಸಂಸ್ಥೆ ಭದ್ರತಾ ಮಂಡಳಿ ಸೋಮವಾರ ತುರ್ತು ಸಭೆ ನಡೆಸಲಿದೆ.

ಮಂಡಳಿಯ ಅಧ್ಯಕ್ಷ ಸ್ಥಾನವನ್ನು ಪ್ರಸ್ತುತ ಭಾರತ ವಹಿಸಿಕೊಂಡಿದೆ. ಕೇವಲ ಒಂದು ವಾರದ ಒಳಗೆ ಎರಡನೇ ಬಾರಿ ಮಂಡಳಿಯ ಸಭೆ ನಡೆಯುತ್ತಿದೆ.

‘ಭಾರತದ ಅಧ್ಯಕ್ಷತೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆ ನಡೆಯಲಿದೆ. ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೊ ಗುಟೆರಸ್ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಕಾಯಂ ಪ್ರತಿನಿಧಿ ಟಿ.ಎಸ್‌. ತ್ರಿಮೂರ್ತಿ ಟ್ವೀಟ್‌ ಮಾಡಿದ್ದಾರೆ.

ADVERTISEMENT

‘ಅಫ್ಗಾನಿಸ್ತಾನದಲ್ಲಿ ಪರಿಸ್ಥಿತಿ ಗಂಭೀರವಾಗಿದೆ. ತಾಲಿಬಾನ್‌ ತಾಳ್ಮೆ ವಹಿಸಬೇಕು. ಜನರ ಜೀವ ರಕ್ಷಿಸಲು ಆದ್ಯತೆ ನೀಡಬೇಕು. ಸಂಘರ್ಷದಿಂದಾಗಿ ಸಾವಿರಾರು ಜನರು ಮನೆಗಳನ್ನು ತೊರೆದಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಭವಿಷ್ಯದ ಬಗ್ಗೆ ಹೆಚ್ಚು ಗಮನ ನೀಡಬೇಕಾಗಿದೆ’ ಎಂದು ಗುಟೆರಸ್‌ ಅವರು ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.