ADVERTISEMENT

ಲಿಂಗ ಸಮಾನತೆಗೆ ಒತ್ತು ನೀಡಬೇಕು: ವಿಶ್ವಸಂಸ್ಥೆ

ಏಜೆನ್ಸೀಸ್
Published 23 ಮಾರ್ಚ್ 2021, 9:28 IST
Last Updated 23 ಮಾರ್ಚ್ 2021, 9:28 IST
ವಿಶ್ವಸಂಸ್ಥೆ
ವಿಶ್ವಸಂಸ್ಥೆ   

ವಿಶ್ವಸಂಸ್ಥೆ: ‘ಜಾಗತಿಕವಾಗಿ ಲಿಂಗ ಸಮಾನತೆ ತರಲು ರಾಜಕೀಯ ನಾಯಕತ್ವದಲ್ಲಿ ಮಹಿಳೆಯರು ಮತ್ತು ‍ಪುರುಷರ ನಡುವಿನ ಅಂತರವನ್ನು ವಿಶ್ವಸಂಸ್ಥೆ ಹೋಗಲಾಡಿಸಬೇಕು. ಕೋವಿಡ್‌ ಪಿಡುಗಿನ ಬಳಿಕ ಆರ್ಥಿಕತೆಯ ಪುನರ್‌ ನಿರ್ಮಾಣದಲ್ಲಿ ಮಹಿಳೆಯರಿಗೂ ಆದ್ಯತೆ ನೀಡಬೇಕು’ ಎಂದು ವಿಶ್ವಸಂಸ್ಥೆಯ ಮಹಿಳಾ ಘಟಕ ಒತ್ತಾಯಿಸಿದೆ.

ಕೋವಿಡ್‌ ಪಿಡುಗಿನ ಸಂದರ್ಭದಲ್ಲಿ ಮಹಿಳೆಯರ ವಿರುದ್ಧ ಕೌಟುಂಬಿಕ ಹಿಂಸಾಚಾರಗಳು ಹೆಚ್ಚಿವೆ. ಕೋವಿಡ್‌ ಬಿಕ್ಕಟ್ಟಿನ ವೇಳೆಯಲ್ಲಿ ಮೂರನೇ ಎರಡು ಭಾಗದಷ್ಟು ಮಹಿಳೆಯರು ಉದ್ಯೋಗ ಕಳೆದುಕೊಂಡಿದ್ದಾರೆ’ ಎಂದು ವಿಶ್ವಸಂಸ್ಥೆಯ ಮಹಿಳಾ ಘಟಕದ ಮುಖ್ಯಸ್ಥೆ ಫುಮ್‌ಜಿಲೆ ಮ್ಲಾಂಬೊ ಎನ್‌ಗುಕಾ ತಿಳಿಸಿದ್ದಾರೆ

‘ವಿಶ್ವದಲ್ಲಿ 1.1 ಕೋಟಿ ಹುಡುಗಿಯರು ವಿದ್ಯಾಭ್ಯಾಸವನ್ನು ನಿಲ್ಲಿಸಬೇಕಾದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಬಾಲ್ಯ ವಿವಾಹ ಮತ್ತು ಅನಾಥಾಲಯಗಳ ಸಂಖ್ಯೆಯೂ ಹೆಚ್ಚಿದೆ’ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ADVERTISEMENT

‘ಸಾಂಕ್ರಾಮಿಕದ ವೇಳೆಯಲ್ಲಿ ಮಹಿಳೆಯರ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಅಲ್ಲದೆ ಮಹಿಳೆಯರ ವಿಷಯದಲ್ಲಿ ತಾರತಮ್ಯವೂ ಇದೆ. ಸಂಪನ್ಮೂಲಗಳ ಸಮಾನ ಹಂಚಿಕೆಯಂತೆ ಲಿಂಗ ಸಮಾನತೆಯೂ ಬಹಳ ಮಹತ್ವದ್ದಾಗಿದೆ’ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.