ವಿಶ್ವಸಂಸ್ಥೆ: ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಉನ್ನತ ಮಟ್ಟದ ಅಧಿವೇಶನವನ್ನು (ಯುಎನ್‌ಜಿಎ) ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆಯಿದೆ ಎಂದು ವಿಶ್ವಸಂಸ್ಥೆ ಹೊರಡಿಸಿದ ತಾತ್ಕಾಲಿಕ ಪಟ್ಟಿಯಲ್ಲಿ ತಿಳಿಸಲಾಗಿದೆ.
ಯುಎನ್‌ಜಿಎಯ 80ನೇ ಅಧಿವೇಶನವು ಸೆಪ್ಟೆಂಬರ್ 9ರಿಂದ ಆರಂಭವಾಗಲಿದೆ. ಸಾಮಾನ್ಯ ಸಭೆಯ ಚರ್ಚೆಯು ಸೆಪ್ಟೆಂಬರ್ 23ರಿಂದ 29ರವರೆಗೆ ನಡೆಯಲಿದೆ.
ವಿಶ್ವ ನಾಯಕರನ್ನು ಉದ್ದೇಶಿಸಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಸೆಪ್ಟೆಂಬರ್ 23ರಂದು ಮಾತನಾಡಲಿದ್ದಾರೆ. ಸೆಪ್ಟೆಂಬರ್ 26ರಂದು ನಡೆಯಲಿರುವ ಅಧಿವೇಶನದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಇಸ್ರೇಲ್, ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಸರ್ಕಾರಗಳ ಮುಖ್ಯಸ್ಥರು ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಾತ್ಕಾಲಿಕ ಪಟ್ಟಿಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.