ADVERTISEMENT

ಶ್ರೀಲಂಕಾ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿರುವ ಕೇಂದ್ರ ಸಚಿವ ಮುರಳೀಧರನ್‌

ಪಿಟಿಐ
Published 3 ಫೆಬ್ರುವರಿ 2023, 11:30 IST
Last Updated 3 ಫೆಬ್ರುವರಿ 2023, 11:30 IST
ವಿ. ಮುರಳೀಧರನ್‌
ವಿ. ಮುರಳೀಧರನ್‌   

ಕೊಲಂಬೊ: ‘ಶ್ರೀಲಂಕಾದ 75ನೇ ಸ್ವಾತಂತ್ರ್ಯ ದಿನಾಚರಣೆ ಶನಿವಾರ ನಡೆಯಲಿದ್ದು, ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ. ಮುರಳೀಧರನ್‌ ಅವರು ಭಾರತವನ್ನು ಪ್ರತಿನಿಧಿಸಲಿದ್ದಾರೆ’ ಎಂದು ಶ್ರೀಲಂಕಾ ಅಧಿಕಾರಿಗಳು ತಿಳಿಸಿದ್ದಾರೆ.

‘ಇದೇ ವೇಳೆ ಮುರಳೀಧರನ್‌ ಅವರು ಶ್ರೀಲಂಕಾದ ಅಧ್ಯಕ್ಷ ರಾನಿಲ್‌ ವಿಕ್ರಮಸಿಂಘೆ ಹಾಗೂ ವಿದೇಶಾಂಗ ಸಚಿವ ಅಲಿ ಸಬ್ರಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಲಿದ್ದಾರೆ’ ಎಂದು ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಮುರಳೀಧರನ್‌ ಸೇರಿದಂತೆ ಅನೇಕ ವಿದೇಶಿ ಗಣ್ಯರು ಶ್ರೀಲಂಕಾದ 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.