ADVERTISEMENT

ಬ್ರಿಟನ್ ಪ್ರಧಾನಿ ಚುನಾವಣೆಯಲ್ಲಿ ಸೋಲು: ರಿಷಿ ಸುನಕ್ ಮೊದಲ ಪ್ರತಿಕ್ರಿಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಸೆಪ್ಟೆಂಬರ್ 2022, 14:12 IST
Last Updated 5 ಸೆಪ್ಟೆಂಬರ್ 2022, 14:12 IST
ರಿಷಿ ಸುನಕ್‌
ರಿಷಿ ಸುನಕ್‌   

ಲಂಡನ್‌: ಲಿಜ್ ಟ್ರಸ್‌ ಅವರು ಬ್ರಿಟನ್‌ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ತೀವ್ರ ಪೈಪೋಟಿ ನೀಡಿದ್ದ ಭಾರತ ಮೂಲದ ರಿಷಿ ಸುನಕ್‌ ಸೋಲು ಅನುಭವಿಸಿದ್ದಾರೆ.

ಫಲಿತಾಂಶದ ನಂತರ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಸುನಕ್‌, ಹೊಸ ಪ್ರಧಾನಿ ಲಿಜ್ ಟ್ರಸ್‌ ಹಿಂದೆ ನಾವೆಲ್ಲ ಒಟ್ಟಾಗಿ ಸಾಗೋಣವೆಂದು ಹೇಳಿದ್ದಾರೆ.

‘ಈ ಅಭಿಯಾನದಲ್ಲಿ ನನಗೆ ಮತ ನೀಡಿದ ಎಲ್ಲರಿಗೂ ಧನ್ಯವಾದಗಳು. ಕನ್ಸರ್ವೇಟಿವ್ ಪಕ್ಷದ ಬೆಂಬಲಿಗರು ಒಂದೇ ಕುಟುಂಬಕ್ಕೆ ಸೇರಿದವರೆಂದು ನಾನು ಈ ಹಿಂದೆಯೇ ಹೇಳಿದ್ದೇನೆ. ನಾವು ಈಗ ಹೊಸ ಪ್ರಧಾನಿ ಲಿಜ್ ಟ್ರಸ್ ಅವರ ಹಿಂದೆ ಒಂದಾಗಿ ಸಾಗಬೇಕಿದೆ. ಕಷ್ಟದ ಸಮಯದಲ್ಲಿ ಅವರು ದೇಶವನ್ನು ಮುನ್ನಡೆಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಕನ್ಸರ್ವೇಟಿವ್ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿರುವುದು ಹೆಮ್ಮೆ ಎನಿಸಿದೆ. ಮಹಾನ್ ದೇಶದ ಮುಂದಾಳತ್ವ ವಹಿಸಲು ನನ್ನಲ್ಲಿ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು. ಈ ಕಠಿಣ ಸಮಯದಲ್ಲಿ ನಮ್ಮ ಆರ್ಥಿಕತೆ ಬೆಳೆಸಲು ಮತ್ತು ದೇಶದ ಸಾಮರ್ಥ್ಯ ಸಾಬೀತುಪಡಿಸಲು ದಿಟ್ಟ ಕ್ರಮ ತೆಗೆದುಕೊಳ್ಳುತ್ತೇನೆ’ ಎಂದು ಟ್ರಸ್‌ ಟ್ವೀಟ್‌ನಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.